ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ಇದರಲ್ಲಿ ಪ್ರಮುಖ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯು ಈಗಾಗಲೇ ರಾಜ್ಯದಲ್ಲಿ ಹಲವಾರು ಬಡವರ ಹೊಟ್ಟೆ ತುಂಬಿಸುತ್ತಿದೆ.
ಇನ್ನು ಬಿಪಿಎಲ್ ಕಾರ್ಡ್ ಇರುವವರಿಗೆ ಮಾತ್ರ ಅನ್ನ ಭಾಗ್ಯ ಯೋಜನೆ ಅನುಸರಿಸುವ ರೀತಿಯಲ್ಲಿ ಇದೀಗ ರಾಜ್ಯ ಸರ್ಕಾರ ಮುಂದಾಗಿದ್ದು ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಹೌದು, ಬಡವರು ಅಥವಾ ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ಬಿಪಿಎಲ್ ಕಾರ್ಡ್ ಪಡಿಯಲು ಅರ್ಹರಿರುತ್ತಾರೆ ಆದರೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡ್ ಪಡೆದು ಅಕ್ರಮವಾಗಿ ಅಕ್ಕಿ ಹಾಗೂ ಇನ್ನಿತರ ಸಾಮಗ್ರಿಗಳನ್ನು ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.
ಈಗಾಗಲೇ ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಒಟ್ಟು 4.9 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೈಗೊಂಡ ಅನರ್ಹ ಪಡಿತರದಾರರ ಪತ್ತೆ ಕಾರ್ಯದಲ್ಲಿ ಕಳೆದ ಕೆಲವು ವಾರಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅವರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಇದನ್ನೂ ಓದಿ: ಯತೀಂದ್ರ ಹೇಳಿಕೆಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಈ ಅಭಿಯಾನದಲ್ಲಿ ಬಿಪಿಎಲ್ ಕಾರ್ಡ್ ಕಳೆದುಕೊಂಡ ಅನರ್ಹರಿಗೆ ಸರ್ಕಾರ ಎಪಿಎಲ್ ಕಾರ್ಡ್ಗಳನ್ನು ನೀಡಲು ಮುಂದಾಗಿದೆ. ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದು ಪಡಿತರ ಯೋಜನೆಯ ಲಾಭ ಪಡೆದುಕೊಳ್ಳುತ್ತಿರುವ ಫಲಾನುಭವಿಗಳಿಗೆ ದಂಡ ವಿಧಿಸುವುದಕ್ಕೂ ಆಹಾರ ಇಲಾಖೆ ಚಿಂತನೆ ನಡೆಸುತ್ತಿದೆ. ಈ ಸಂಬಂಧ ದಂಡದ ನಿಯಮಗಳ ರೂಪುರೇಷೆಗಳನ್ನು ಕೂಡ ಸಿದ್ಧಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
