ಹೈದರಾಬಾದ್: ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಚಿನ್ನಟೆಕೂರು ಬಳಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 20ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು, ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್ಸು ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಇನ್ನುಈ ಅಪಘಾತ ಹೇಗೆ ಸಂಭವಿಸಿದೆ ಎಂಬುವುದು ಇಲ್ಲಿಯವರೆಗೂ ತಿಳಿದು ಬಂದಿಲ್ಲ. ಬಸ್ ಬೈಕಿಗೆ ದಿಕ್ಕಿ ಹೊಡಿತೋ ಅಥವಾ ಬೈಕ್ ಬಸ್ಸಿಗೆ ಡಿಕ್ಕಿ ಹೊಡಿತೋ ಗೊತ್ತಿಲ್ಲ. ಆದರೆ ಈ ದುರಂತದಲ್ಲಿ 20 ಕ್ಕೂ ಹೆಚ್ಚು ಜನೃತಪಟ್ಟಿದ್ದು ಹಲವಾರು ಜನ ಗಾಯಗೊಂಡಿದ್ದಾರೆ.
ಅಲ್ಲದೆ ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬೈಕ್ ಬಸ್ಸಿಗೆ ಡಿಕ್ಕಿ ಹೊಡೆದಿದೆಯೇ ಅಥವಾ ಬಸ್ಸಿಗೆ ಬೈಕ್‌ಗೆ ಡಿಕ್ಕಿ ಹೊಡೆದಿದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಇದು ತನಿಖೆಯಿಂದ ದೃಢಪಡಬೇಕಿದೆ ಎಂದು ಕರ್ನೂಲ್ ಜಿಲ್ಲಾಧಿಕಾರಿ ಸಿರಿ ಹೇಳಿದ್ದಾರೆ.
ಕೆಲವರು ವೇಗವಾಗಿ ಬಂದ ಬೈಕ್ ಸವಾರ ಬಸ್ಸಿನ ಹಿಂಬದಿಗೆ ಗುದ್ದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಿದರೆ ಕೆಲವರು ಬಸ್ಸು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನುತ್ತಿದ್ದಾರೆ.
ಗುದ್ದಿದ ರಭಸಕ್ಕೆ ಬಸ್ಸಿನ ಕೆಳಭಾಗಕ್ಕೆ ಬೈಕ್ ನುಗ್ಗಿದೆ. ಕೆಳಭಾಗದಲ್ಲಿ ಸಿಲುಕಿಕೊಂಡಿದ್ದ ಬೈಕನ್ನು ಬಸ್ಸು 300 ಮೀ. ದೂರದವರೆಗೆ ಎಳೆದುಕೊಂಡು ಹೋಗಿದೆ. ಈ ವೇಳೆ ಬೈಕಿನಲ್ಲಿದ್ದ ಪೆಟ್ರೋಲ್ ಕೆಳಕ್ಕೆ ಚೆಲ್ಲಿದೆ.
ರಸ್ತೆಯಲ್ಲಿ ಬೈಕನ್ನು ಎಳೆದುಕೊಂಡು ಹೋಗಿದ್ದರಿಂದ ಘರ್ಷಣೆಯಿಂದಾಗಿ ಕಿಡಿ ಹೊತ್ತಿದೆ. ಬೆಂಕಿಯ ಕಿಡಿ ಡೀಸೆಲ್ ಟ್ಯಾಂಕ್ ಮೇಲೆ ಚಿಮ್ಮಿದೆ. ಟ್ಯಾಂಕ್‌ಗೆ ಕಿಡಿ ಚಿಮ್ಮಿದ ಕೂಡಲೇ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿದೆ. ಇದನ್ನೂ ಓದಿ: ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದ್ರೆ ಬೀಳುತ್ತೆ ಭಾರಿ ದಂಡ!
ದುರಂತ ನಡೆದ ಬಳಿಕ ಬಸ್ಸು ಚಾಲನೆ ಮಾಡುತ್ತಿದ್ದ ಚಾಲಕ ಪರಾರಿಯಾಗಿದ್ದರೆ ಮತ್ತೊಬ್ಬ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ಆಗಮಿಸಿ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ತಿಳಿಸಿದ್ದಾರೆ.
