ಬೆಂಗಳೂರು: ಕನ್ನಡ ಬಿಗ್ ಬಾಸ್ ಮಾಜಿ ಸ್ಪರ್ಧೆ ಹಾಗೂ ನಟಿ ದಿವ್ಯಾ ಸುರೇಶ್ ಅವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ.
ಹೌದು, ನಟಿ ದಿವ್ಯಾ ಸುರೇಶ್ ಅವರ ಕಾರು ಬೈಕ್ಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ನಟಿ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಹೈದರಾಬಾದ್ ಬಸ್ ಬೆಂಕಿ ದುರಂತ; ಸಂತಾಪ ಸೂಚಿಸಿದ ಬಿ ನಾಗೇಂದ್ರ
ಇನ್ನು ಅಕ್ಟೋಬರ್ 4 ರಂದು ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ ಈ ಕುರಿತು ಅಕ್ಟೋಬರ್ 7ರಂದು ದಿವ್ಯಾ ಅವರ ವಿರುದ್ಧ ದೂರು ಕೂಡ ದಾಖಲಾಗಿದೆ. ಅಕ್ಟೋಬರ್.07 ರಂದು ಗಾಯಗೊಂಡ ಮಹಿಳೆಯ ಸಂಬಂಧಿ ಕಿರಣ್ ನಟಿ ವಿರುದ್ಧ ದೂರು ದಾಖಲಿಸಿದ್ದಾರೆ.
