Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದು ನಡೆದ ಮಹತ್ವದ ಸಭೆಯಲ್ಲಿ ಸಿಎಂ ಸಚಿವರಿಗೆ ನೀಡಿದ ಮಹತ್ವದ ಸೂಚನೆಗಳೇನು?
  • Bangalore
  • Politics
  • State

ಇಂದು ನಡೆದ ಮಹತ್ವದ ಸಭೆಯಲ್ಲಿ ಸಿಎಂ ಸಚಿವರಿಗೆ ನೀಡಿದ ಮಹತ್ವದ ಸೂಚನೆಗಳೇನು?

Praja Vahini October 24, 2025 1 minute read
WhatsApp Image 2025-10-24 at 15.43.12
Spread the love

ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಭಾಂಗಣದಲ್ಲಿ ಇಂದು (ಶುಕ್ರವಾರ ಅ. 24) ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು.

ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳ ಅನುಷ್ಠಾನ ಹಂತದಲ್ಲಿವೆ.

ಸುಮಾರು ರೂ.1.5 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ.

ಸುಪ್ರೀಂಕೋರ್ಟ್ ನ ಕಾರಣ ಹೇಳಿಕೊಂಡು ಕೂರಬಾರದು. ಅಕ್ಕ ಪಕ್ಕದ ರಾಜ್ಯಗಳಿಗೂ ಇರುವುದೂ ಇದೇ ಸುಪ್ರೀಂ ಕೋರ್ಟ್. ಬೇರೆ ರಾಜ್ಯಗಳಿಗೆ ಆಗದ ಸಮಸ್ಯೆ ನಮಗೆ ಆಗುತ್ತಿದೆ ಅನ್ನುವ ಕಾರಣ ನೀಡಿದರೆ ಕ್ರಮ ಜರುಗಿಸಬೇಕಾಗತ್ತದೆ.

ರಾಜ್ಯದಲ್ಲಿ ಕಾರ್ಯಪಡೆ ಹೆಚ್ಚಿದೆ. ಕೌಶಲ್ಯಯುತ ಕಾರ್ಮಿಕ ಬಲ ಕೂಡ ರಾಜ್ಯದಲ್ಲಿ ಹೆಚ್ಚಿದೆ. ಹೀಗಾಗಿ ಉದ್ಯೋಗ ಸೃಷ್ಟಿ ರಾಜ್ಯದಲ್ಲಿ ಹೆಚ್ಚೆಚ್ಚು ಆಗುತ್ತಿದೆ. ಕೈಗಾರಿಕೆಗಳಿಗೆ ಅನುಮತಿ ನೀಡುವ ಮತ್ತಿತರ ವಿಚಾರದಲ್ಲಿ ಪ್ರಕ್ರಿಯೆ ಇನ್ನಷ್ಟು ವೇಗ ಪಡೆಯಬೇಕು. ಇದನ್ನು ಅಧಿಕಾರಿಗಳು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.

ತಮಿಳುನಾಡಿನಲ್ಲಿ 51 SEZ ಗಳಿದ್ದು ಒಟ್ಟಾರೆ 8.9% ಕೊಡುಗೆ ನೀಡುತ್ತಿವೆ. ಆದರೆ, ರಾಜ್ಯದಲ್ಲಿ ಕೇವಲ 37 SEZ (special economic zone) ಗಳಿದ್ದು ನಾವು 8.2% ರಷ್ಟು ಕೊಡುಗೆ ನೀಡುತ್ತಿದ್ದೇವೆ. ಇದರಲ್ಲೂ ರಾಜ್ಯದ ಕೊಡುಗೆಯೇ ಹೆಚ್ಚಾಗಿದೆ. ಇಂಥಾ ಅನುಕೂಲಕರ ಪರಿಸ್ಥಿತಿಯನ್ನು ಗಮನಿಸಬೇಕು.

ಹಸಿರು ಇಂಧನ ಮೂಲಗಳಿಂದ ಕೈಗಾರಿಕೆಗಳಿಗೆ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಅಸಾಂಪ್ರದಾಯಿಕ ಇಂಧನ ಮೂಲಗಳಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ವ್ಯವಸ್ಥಿತ ಯೋಜನೆ ರೂಪಿಸಬೇಕು. ಇದನ್ನೂ ಓದಿ:  ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ದಾಖಲೆ ಬರೆದ KSDL

ಕೇಂದ್ರ ಸರ್ಕಾರ 2 ಪ್ರಮುಖ ಕಾರ್ಮಿಕ ಸುಧಾರಣೆಗಳ ಅನುಷ್ಠಾನವನ್ನು ಪ್ರಸ್ತಾಪಿಸಿದೆ. ಕಾರ್ಮಿಕರ ಕೆಲಸದ ಅವಧಿಯನ್ನು ಮರು ನಿಗದಿಪಡಿಸುವ ಸಂದರ್ಭದಲ್ಲಿ ಕಾರ್ಮಿಕರ ಹಿತವನ್ನು ಗಮನದಲ್ಲಿಡಲಾಗುವುದು.

ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿಗಳ ವಿಲೇವಾರಿ ಆಗುತ್ತಿಲ್ಲ ಎಂದು ದೂರುಗಳಿವೆ. ಎಲ್ಲಾ ಸೇವೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ 29 ಸೇವೆಗಳು ಏಕಗವಾಕ್ಷಿ ವ್ಯವಸ್ಥೆಯಿಂದ ಹೊರಗಿದ್ದು, ಅವುಗಳನ್ನು ಸಹ ಇದರಡಿ ತರಬೇಕು. ಎಲ್ಲಾ ಅರ್ಜಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಡಿ ಏಕೀಕೃತ ವಿಲೇವಾರಿಗೆ ಕ್ರಮ.

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾದರೆ ಮಾತ್ರ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆಸ್ನೇಹಿ ವಾತಾವರಣವನ್ನು ಉತ್ತಮ ಪಡಿಸಲು ಎಲ್ಲರೂ ಸಮನ್ವಯದಿಂದ ಶ್ರಮಿಸಬೇಕು ಎಂದರು.

About the Author

Praja Vahini

Editor

View All Posts

Spread the love

Post navigation

Previous: ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ದಾಖಲೆ ಬರೆದ KSDL
Next: ಜನಸೇವೆಗಾಗಿ ಉಚಿತ ಸೌಲಭ್ಯ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.