ಬೆಂಗಳೂರು: ಇಂದು ಬೇಗೂರಿನ ಶ್ರೀ ಪಾರ್ವತಿ ಸಮೇತ ನಾಗೇಶ್ವರ ಸ್ವಾಮಿ ದೇವಾಲಯದಲ್ಲಿ ನಿರ್ಮಿಸಲಾದ ಎನ್.ಎಸ್. ಕಲ್ಯಾಣ ಮಂಟಪ ಹಾಗೂ ಅನ್ನಪೂರ್ಣೇಶ್ವರಿ ಡೈನಿಂಗ್ ಹಾಲ್ (ಉಚಿತ ಛತ್ರಿ) ಯ ಉದ್ಘಾಟನಾ ಕಾರ್ಯಕ್ರಮ ಭವ್ಯವಾಗಿ ನೆರವೇರಿತು.
ಈ ಉದ್ಘಾಟನಾ ಕಾರ್ಯಕ್ರಮವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ ಹಾಗೂ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ ಅವರು ಉದ್ಘಾಟಿಸಿದರು. ಇದನ್ನೂ ಓದಿ: ಇಂದು ನಡೆದ ಮಹತ್ವದ ಸಭೆಯಲ್ಲಿ ಸಿಎಂ ಸಚಿವರಿಗೆ ನೀಡಿದ ಮಹತ್ವದ ಸೂಚನೆಗಳೇನು?
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಂ ಸತೀಶ್ ರೆಡ್ಡಿ ಅವರು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉಚಿತವಾಗಿ ಸೌಲಭ್ಯ ಒದಗಿಸುವ ಉದ್ದೇಶದಿಂದ ನಿರ್ಮಿಸಲಾದ ಈ ಮಂಟಪವು ಜನಸೇವೆಗಾಗಿ ಮಹತ್ತರ ಹೆಜ್ಜೆಯಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ಕೃಷ್ಣಪ್ಪ, ಬಿಜೆಪಿ ಮುಖಂಡರು ಹಾಗೂ ಆಶ್ರಿತ್ ಗ್ರೂಪ್ಸ್ ಮಾಲೀಕರಾದ ನಿವಾಸ್ ರೆಡ್ಡಿ, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
