Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸಿಎಂ ಕ್ರಮದ ಎಚ್ಚರಿಕೆ
  • Bangalore
  • Politics
  • State

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸಿಎಂ ಕ್ರಮದ ಎಚ್ಚರಿಕೆ

Praja Vahini October 24, 2025 1 minute read
WhatsApp Image 2025-10-24 at 17.52.22
Spread the love

ಬೆಂಗಳೂರು: ಸುಲಲಿತ ವಾಣಿಜ್ಯ ಸಂಸ್ಕೃತಿಯಲ್ಲಿ ರಾಜ್ಯವನ್ನು ಇಡೀ ದೇಶದಲ್ಲೇ ನಂ.1 ಮಾಡಲಾಗುವುದು. ಹೂಡಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕ್ಷಿಪ್ರಗತಿಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ನಾನಾ ಇಲಾಖೆಗಳಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ನಿರ್ದೇಶನ ನೀಡಿ, ವರದಿ ಕೊಡುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ. ಇದನ್ನು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ, ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಉನ್ನತ ಮಟ್ಟದ ಯೋಜನಾ ಒಪ್ಪಿಗೆ ನೀಡಿಕೆ ಸಮಿತಿಯ ಸಭೆಯ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಪ್ರತಿಯೊಂದು ಕೈಗಾರಿಕಾ ಅನುಮೋದನೆಗಳಿಗೂ ಕಾಲಮಿತಿಯನ್ನು ನಿಗದಿ ಪಡಿಸಲಾಗುತ್ತದೆ. ಇದನ್ನು ಮೀರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯವರು ಎಚ್ಚರಿಕೆ ನೀಡಿದ್ದಾರೆ ಎಂದರು. ಇದನ್ನೂ ಓದಿ: 11 ಹೊಸ ಯೋಜನೆಗಳು, 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ: ಎಂ.ಬಿ ಪಾಟೀಲ

ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದಂತೆ ನೆರೆಹೊರೆಯ ತೆಲಂಗಾಣ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಯಾವ್ಯಾವ ಕೆಲಸಗಳಿಗೆ ಎಷ್ಟೆಷ್ಟು ದಿನಗಳಲ್ಲಿ ಒಪ್ಪಿಗೆ ಕೊಡಲಾಗುತ್ತಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಸಭೆಯಲ್ಲಿ ಚರ್ಚಿಸಿದರು. ಇಂತಹ ವಿಚಾರಗಳಲ್ಲಿ ಭೂ ಬಳಕೆಯ ಉದ್ದೇಶ ಬದಲಾವಣೆ, ವಿದ್ಯುತ್ ಸೌಲಭ್ಯ, ಮರ ಕಡಿಯಲು/ ಸ್ಥಳಾಂತರಕ್ಕೆ ಒಪ್ಪಿಗೆ, ನೀರಿನ ಪೂರೈಕೆ, ಅಗ್ನಿಶಾಮಕ ಇಲಾಖೆಯ ಒಪ್ಪಿಗೆ, ಕೈಗಾರಿಕೆಗಳ ನೋಂದಣಿ ಮತ್ತು ಲೈಸೆನ್ಸ್, ಬಾಯ್ಲರ್ ನೋಂದಣಿ, ಲಿಫ್ಟ್ ಬಳಕೆಗೆ ಲೈಸೆನ್ಸ್ ಮುಂತಾದವು ಇವೆ. ಆ ರಾಜ್ಯಗಳಲ್ಲಿ ಈ ಸೇವೆಗಳನ್ನು ಕನಿಷ್ಠ 7 ದಿನಗಳಿಂದ ಹಿಡಿದು ಗರಿಷ್ಠ 66 ದಿನಗಳಲ್ಲಿ ಒದಗಿಸಲಾಗುತ್ತಿದೆ. ಆದರೆ ರಾಜ್ಯದಲ್ಲಿ ಇವುಗಳ ಪೈಕಿ ಕೆಲವಕ್ಕೆ ಕನಿಷ್ಠ 20 ದಿನಗಳಿಂದ ಗರಿಷ್ಠ 120 ದಿನಗಳು ಹಿಡಿಯುತ್ತಿವೆ. ಇದನ್ನೆಲ್ಲ ಬಗೆಹರಿಸುವಂತೆ ಮುಖ್ಯಮಂತ್ರಿಯವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಅವರು ವಿವರಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: 11 ಹೊಸ ಯೋಜನೆಗಳು, 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ: ಎಂ.ಬಿ ಪಾಟೀಲ
Next: ಏಟಿಗೆ ಎದುರೇಟು; ಪ್ರತಾಪ್ ಈಶ್ವರ್ ನಡುವೆ ನಿಲ್ಲದ ಗುದ್ದಾಟ

Views:

40

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.