ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದಿ. ಪುನೀತ್ ರಾಜಕುಮಾರ್ ಅವರಿಗೆ ಇಂದು (ಬುಧವಾರ ಅ. 29) ನಾಲ್ಕನೇ ವರ್ಷದ ಪುಣ್ಯ ಸ್ಮರಣೆ.
ಇನ್ನು ಪುನೀತ್ ಅವರ ಪುಣ್ಯಸ್ಮರಣೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪುನೀತ್ ಅವರ ಅಭಿಮಾನಿಗಳು ಆಗಮಿಸಿ ನೆಚ್ಚಿನ ನಟನ ಪುಣ್ಯ ಸ್ಮರಣೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಅಪ್ಪು 4ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಅಭಿಮಾನಿಗಳು
ಅಲ್ಲದೆ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆಗೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ಡಾ. ರಾಜಕುಮಾರ್ ಕುಟುಂಬ ಸಮೇತವಾಗಿ ಕಂಠೀರವ ಸ್ಟುಡಿಯೋಗೆ ತೆರಳಿ ಪುನೀತ್ ರಾಜಕುಮಾರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಬಳಿಕ ಅಪ್ಪುಗೆ ಇಷ್ಟವಾದ ತಿನಿಸುಗಳನ್ನಿಟ್ಟು ಪೂಜೆ ನೆರವೇರಿಸಿದ್ದಾರೆ.
