Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತೇಜಸ್ವಿ ಸೂರ್ಯ ಇಸ್ ವೇಸ್ಟ್ ಮೆಟಿರಿಯಲ್: ಡಿಕೆಶಿ
  • Bangalore
  • Politics
  • State

ತೇಜಸ್ವಿ ಸೂರ್ಯ ಇಸ್ ವೇಸ್ಟ್ ಮೆಟಿರಿಯಲ್: ಡಿಕೆಶಿ

Praja Vahini October 30, 2025 1 minute read
WhatsApp Image 2025-10-30 at 18.50.29
Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಅವರಿಗೆ ಇತ್ತೀಚಿಗಷ್ಟೇ ಖಾಲಿ ಟ್ರಂಕ್ ಎಂದು ಹೇಳುವ ಮೂಲಕ ತೇಜಸ್ವಿ ಸೂರ್ಯ ಅವರ ಕಂಗೆಣ್ಣಿಗೆ ಗುರಿಯಾಗಿದ್ದ ಡಿಕೆ ಶಿವಕುಮಾರ್ ಅವರು ಇದೀಗ ಮತ್ತೊಮ್ಮೆ ತೇಜಸ್ವಿ ಸೂರ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೌದು, ಡಿಸಿ ಎಂಡಿ ಕೆ ಶಿವಕುಮಾರ್ ಅವರು ತೇಜಸ್ವಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ತೇಜಸ್ವಿ ಸೂರ್ಯ ಇನ್ನೂ ಎಸಳು, ಅನುಭವವಿಲ್ಲದ ವೇಸ್ಟ್ ಮೆಟೀರಿಯಲ್ ಎಂದು ಹೇಳಿದ್ದಾರೆ.

ನಗರದಲ್ಲಿ ಇಂದು (ಗುರುವಾರ ಅ. 30) ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಆ ಹುಡುಗ ಇನ್ನು ಎಳಸು. ಆತನಿಗೆ ಇನ್ನು ಅನುಭವವಿಲ್ಲ. ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಟನಲ್ ರಸ್ತೆ ಬೇಡ ಎಂದು ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು? ಈ ದೇಶದಲ್ಲಿ, ಪ್ರಪಂಚದಲ್ಲಿಯೇ ಟನಲ್ ರಸ್ತೆಗಳೇ ಬೇಡ ಎಂದು ಅವನು ಕೇಂದ್ರ ಸಚಿವನಾದ ಮೇಲೆ ಲೋಕಸಭೆಯಲ್ಲಿ ತೀರ್ಮಾನ ಮಾಡಲಿ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಟನಲ್ ರಸ್ತೆ ವಿಚಾರದಲ್ಲಿ ನಾನು ತಾಂತ್ರಿಕ ತಜ್ಞ ಅಲ್ಲ: ಡಿಕೆಶಿ

ಏನೋ ಹೋಗಲಿ ಅಂತ ಗೌರವ ಕೊಟ್ಟು ನನ್ನ ಜೊತೆ ಮಾತನಾಡಲು ಅವಕಾಶ ನೀಡಿದರೆ ಏನೇನೋ ಮಾತನಾಡುತ್ತಿದ್ದಾನೆ. ಆದರೆ ನಾನು ಆತನ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಸಂಸದ ತೇಜಸ್ವಿ ಸೂರ್ಯನಿಗೆ ಪ್ರಪಂಚ ಹೇಗಿದೆ ಎಂದೇ ಗೊತ್ತಿಲ್ಲ ಎಂದರು.

ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ..?

ನಾನು ಹುಡುಗನ ಬಳಿ ಕಾರಿಲ್ಲದಿದ್ದರೆ ಹೆಣ್ಣು ನೀಡುವುದಿಲ್ಲ ಎಂದಿದ್ದೆ. ಅದನ್ನೇ ಹಿಡಿದುಕೊಂಡು ಮಾತಾಡುತ್ತಿದ್ದಾನೆ. ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಆಟೋರಿಕ್ಷಾ, ಸಾರ್ವಜನಿಕ‌ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು? ಇವರಿಗೆ ಕಾರುಗಳು ಏಕೆ ಬೇಕು? ಬೆಂಗಳೂರಿನಲ್ಲಿ 1.30 ಕೋಟಿಗೂ ಹೆಚ್ಚು ವಾಹನಗಳಿವೆ ಎಂಬುದನ್ನು ಆತ ಅರ್ಥ ಮಾಡಿಕೊಳ್ಳಬೇಕು, ಅವರಿಗೆಲ್ಲ ವಾಹನ ಬಳಸಬೇಡಿ ಎಂದು ಹೇಳಲು ಆಗುತ್ತದೆಯೇ ಎಂದು ತಿವಿದರು.

ಈ ರಾಜ್ಯಕ್ಕೆ ಮೆಟ್ರೋ ತಂದವರು ನಾವು. ಅವರಿಗೆ ಅಧಿಕಾರ ಇದ್ದಾಗ ಏನು ಮಾಡಿದ್ದಾರೆ? ಕೇಂದ್ರದಿಂದ ಏನು ತೆಗೆದುಕೊಂಡು ಬಂದಿದ್ದಾರೆ? ಬೆಂಗಳೂರಲ್ಲಿ ಎಷ್ಟು ಪಿಲ್ಲರ್ ಹಾಕಿದ್ದಾರೆ? ಯೋಜನೆಗೆ ಹಣವೆಷ್ಟು ತಂದಿದ್ದಾರೆ? ಕೇಂದ್ರ ಸರ್ಕಾರ ಮೆಟ್ರೋ ಯೋಜನೆಗೆ ಶೇ. 11-12 ರಷ್ಟು ಹಣ ನೀಡುತ್ತಿದೆ. ಭೂ ಪರಿಹಾರ ಸೇರಿದಂತೆ ಎಲ್ಲವನ್ನೂ ನಾವೇ ನೀಡುತ್ತಿದ್ದೇವೆ” ಎಂದರು.

“ಅವನ ಬಗ್ಗೆ ನನ್ನ ಬಳಿ ಯಾವ ಪ್ರಶ್ನೆಯನ್ನೂ ಕೇಳಬೇಡಿ. ಹೋಲಿಕೆ ಮಾಡಬೇಡಿ. ಹೀ ಇಸ್ ಎ ವೇಸ್ಟ್ ಮೆಟಿರಿಯಲ್, ಖಾಲಿ ಟ್ರಂಕ್ ಆತ. ಅವರ ಪಕ್ಷದ ಹಿರಿಯ ನಾಯಕರಾದ ಅಶೋಕ್, ಅಶ್ವತ್ಥ ನಾರಾಯಣ್, ಬಸವರಾಜ ಬೊಮ್ಮಾಯಿ,‌ ಜಗದೀಶ್‌ ಶೆಟ್ಟರ್ ಅಂತಹವರು ಮಾತನಾಡಿದರೆ ಉತ್ತರ ನೀಡೋಣ. ಏಕೆಂದರೆ ‌ಅವರಿಗೆ ಇದೆಲ್ಲವೂ ಅರ್ಥವಾಗುತ್ತದೆ. ಬೆಂಗಳೂರಿನಲ್ಲಿ ಬಿಆರ್ ಟಿಎಸ್ ಮಾಡಲು ಎಲ್ಲಿ ಜಾಗವಿದೆ? ಭೂ ಪರಿಹಾರ ಎಷ್ಟಾಗುತ್ತದೆ ಎನ್ನುವ ಅರಿವು ತೇಜಸ್ವಿ ಸೂರ್ಯನಿಗೆ ತಲೆಯಲ್ಲಿಯೇ ಇಲ್ಲ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಕರ್ನಾಟಕ ಮಾದರ ಮಹಾಸಭೆಯ ಪುನರ್‌ ರಚನೆ: ಮುನಿಯಪ್ಪ
Next: ಉಮಾಶ್ರೀಗೆ ಒಲಿದು ಬಂತು ಡಾ. ರಾಜ್ ಕುಮಾರ್ ಪ್ರಶಸ್ತಿ

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.