ದೆಹಲಿ: ಕರ್ನಾಟಕ ರಾಜ್ಯದಲ್ಲಿ ಇಂದು (ಶನಿವಾರ ನವಂಬರ್ 02) ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು ಎಲ್ಲೆಡೆ ಕನ್ನಡ ಬಾವುಟ ರಾರಾಜಿಸುತ್ತಿವೆ.
ಹೌದು, 70ನೇ ಕನ್ನಡ ರಾಜ್ಯೋತ್ಸವವನ್ನು ಇಂದು ರಾಜ್ಯದಲ್ಲಿ ಬಹಳ ಅದ್ದೂರಿಯಾಗಿ ಕನ್ನಡಿಗರು ಆಚರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಶುಭಕೋರಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಕನ್ನಡದಲ್ಲಿಯೇ ಕನ್ನಡಿಗರಿಗೆ ಶುಭ ಕೋರಿರುವುದಲ್ಲದೆ ಕನ್ನಡ ನಾಡಿನ ಸೊಬಗನ್ನು ಕೊಂಡಾಡಿದ್ದಾರೆ
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರ ಕುಟುಂಬಸ್ಥರ ಶಾಪ
ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
