Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಲ್ಲೆಂದರಲ್ಲಿ ಕಸ ಹಾಕುವ ಮುನ್ನ ಇರಲಿ ಎಚ್ಚರ: ಡಿಕೆಶಿ
  • Bangalore
  • Politics
  • State

ಎಲ್ಲೆಂದರಲ್ಲಿ ಕಸ ಹಾಕುವ ಮುನ್ನ ಇರಲಿ ಎಚ್ಚರ: ಡಿಕೆಶಿ

Praja Vahini November 1, 2025 1 minute read
WhatsApp Image 2025-11-01 at 11.48.26
Spread the love

ಬೆಂಗಳೂರು: ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಬಳಿಯ ಭುವನೇಶ್ವರಿ ಪ್ರತಿಮೆ ಬಳಿ ಮಾಧ್ಯಮಗಳಿಗೆ ಇಂದು (ಶನಿವಾರ ನ. 01) ಪ್ರತಿಕ್ರಿಯೆ ನೀಡಿದ ಅವರು, ನಗರದಾದ್ಯಂತ ಈಗಾಗಲೇ‌‌ ಸಾಕಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಗುರುತಿಸಿ ಅವರ ಮನೆ ಮುಂದೆಯೇ ಅದೇ ಕಸ ಸುರಿದು ಬುದ್ದಿವಾದ ಹೇಳುವ ಕೆಲಸ ಮಾಡಲಾಗುತ್ತಿದೆ. ಕಸ ಎಸೆಯುವವರಿಗೆ ದಂಡ ವಿಧಿಸುವ ಕೆಲಸವೂ ನಡೆಯುತ್ತಿದೆ. ಈಗಾಗಲೇ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ ಎಂದರು.

ಮುಂಬೈನಲ್ಲೂ ಮೂಲೆ,‌ ಮೂಲೆಯಲ್ಲಿ ಕಸದ ರಾಶಿ

ಶುಕ್ರವಾರದಂದು ಮುಂಬೈಗೆ ತೆರಳಿದ್ದೆ. ಅಲ್ಲಿಯೂ ಸಹ ಮೂಲೆ,‌ ಮೂಲೆಯಲ್ಲಿ ಕಸ ರಾಶಿ ಬಿದ್ದಿತ್ತು. ಬೇರೆ, ಬೇರೆ ಕಡೆಯಲ್ಲಿಯೂ ಬಿದ್ದಿರಬಹುದು. ಜನರು ತಮಗೆ ಇರುವ ಅವಕಾಶವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ನಿಲ್ಲಿಸಬೇಕು. ಜನರು ಸ್ವಚ್ಚ ಬೆಂಗಳೂರಿಗೆ ಹೆಚ್ಚು ಸಹಕಾರ ನೀಡಬೇಕು ಎಂದರು.

ಮುಂಬೈ ನಗರದಲ್ಲಿ ಪ್ರಮುಖ ರಸ್ತೆಗಳ ಕಾಮಗಾರಿ ಹಾಗೂ ನಿರ್ವಹಣೆ ನಡೆಸಿದವರಿಗೆ ಆ ರಸ್ತೆ ಬದಿಗಳ ಕಸ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ನೀಡಲಾಗಿದೆ ಎನ್ನುವ ಮಾಹಿತಿಯಿದೆ. ಬೆಂಗಳೂರಿನಲ್ಲೂ ಈ ಮಾದರಿ ಜಾರಿ ಮಾಡುವ ಕುರಿತು ಚರ್ಚೆ ಮತ್ತು ಆಲೋಚನೆ ನಡೆಸಲಾಗುತ್ತಿದೆ ಎಂದರು.

ಡಬ್ಬಗಳನ್ನು ಇಟ್ಟುಕೊಂಡು ಮನೆಯ ಕಸವನ್ನು ಅದರಲ್ಲಿ ಸಂಗ್ರಹಿಸಿ. ಅವುಗಳನ್ನು ಕಡ್ಡಾಯವಾಗಿ ಕಸ ಸಂಗ್ರಹ ವಾಹನಗಳಿಗೆ ನೀಡಿ ಎಂದು ಮನವಿ ಮಾಡುತ್ತೇನೆ. ನಮ್ಮ ಅಧಿಕಾರಿಗಳು ಶುಕ್ರವಾರ ತಡರಾತ್ರಿವರೆಗೂ ನನಗೆ ಕಸ ವಿಲೇವಾರಿ ಸೇರಿದಂತೆ ಇದರ ಬಗ್ಗೆ ಮಾಹಿತಿ ನೀಡುತ್ತಿದ್ದರು ಎಂದರು. ಇದನ್ನೂ ಓದಿ: ನೆಲದ ಭಾಷೆ ಮನದ ಭಾಷೆಯಾಗಲಿ: ಸಿಎಂ

ಕಸ ಸಂಗ್ರಹಣೆಗೆ ಸರಿಯಾದ ವ್ಯವಸ್ಥೆಯಿಲ್ಲ ಎಂದು ನಾಗರಿಕರ ಆರೋಪ ಮಾಡುತ್ತಿದ್ದಾರೆ ಆದರೆ ಇದೆಲ್ಲವೂ ಸುಳ್ಳು. ಪ್ರತಿದಿನವೂ ಮನೆಗಳಲ್ಲಿ ಕಸ ಸಂಗ್ರಹ ನಡೆಯುತ್ತಿದೆ. ಸಮಸ್ಯೆ ಎದುರಾಗಿದ್ದರೆ ಸೂಚಿತ ದೂರವಾಣಿ ಸಂಖ್ಯೆಗೆ ದೂರು ನೀಡಲಿ. ಇಡೀ ದೇಶದಲ್ಲಿಯೇ ಅತ್ಯುತ್ತಮ ವ್ಯವಸ್ಥೆ ರೂಪಿಸಿದ್ದೇವೆ. ಎಲ್ಲಾದರೂ ಕಸ, ರಸ್ತೆಗುಂಡಿ ಕಂಡರೆ ನಮಗೆ ಪೋಟೊ ಹಾಗೂ ಜಾಗ ಕಳಿಸಿ ಎನ್ನುವ ಅವಕಾಶ ನೀಡಿದ್ದೇವೆ. ಮಾಧ್ಯಮಗಳು ಪ್ರತಿದಿನ ಒಂದೊಂದು ರಸ್ತೆಗುಂಡಿ ಹಾಕುತ್ತಲೇ ಇರುತ್ತಾರೆ. ಎಷ್ಟೇ ಕೆಲಸ ಮಾಡಿದರೂ ರಸ್ತೆಗುಂಡಿ ಇದ್ದೇ ಇರುತ್ತದೆ. ವಾಹನಗಳು ಜರ್ಕ್ ಹೊಡೆದರೆ ರಸ್ತೆಗುಂಡಿ ಉಂಟಾಗುತ್ತದೆ. ಆದ ಕಾರಣಕ್ಕೆ ನಾವು ಈ ಸಮಸ್ಯೆ ನಿವಾರಣೆಗೆ ಏನೇನೊ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ನೆಲದ ಭಾಷೆ ಮನದ ಭಾಷೆಯಾಗಲಿ: ಸಿಎಂ
Next: ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡಿದ: ಹೆಚ್ ಸಿ ಮಹದೇವಪ್ಪ

Views:

40

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.