ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಂದು (ಶನಿವಾರ ನ. 01) ಅರಮನೆ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಾಲಯಕ್ಕೆ ಸಚಿವ ಹೆಚ್ ಸಿ ಮಹದೇವಪ್ಪ ಭೇಟಿ ನೀಡಿ ಪುಷ್ಪಾರ್ಚನೆಯನ್ನು ಸಲ್ಲಿಸಿದರು
ಬಳಿಕ ಶ್ರೀ ಭುವನೇಶ್ವರಿ ತಾಯಿಯ ಮೆರವಣಿಗೆ ರಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರವಲ್ಲದೆ ನಾವೆಲ್ಲರೂ ಪ್ರತಿದಿನ ಕನ್ನಡ ಹಬ್ಬವನ್ನು ಆಚರಿಸಬೇಕು ಎಂದರು.
ನಮ್ಮ ಕನ್ನಡ ನಾಡಿಗೆ ಬೇರೆ ರಾಜ ಮಾತ್ರವಲ್ಲದೆ ಬೇರೆ ದೇಶದವರು ಬಂದು ಇಲ್ಲಿ ನೆಲೆಊರಿ ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಾರೆ. ಎಲ್ಲರಿಗೂ ನಮ್ಮ ಕನ್ನಡ ನಾಡು, ಕನ್ನಡ ನುಡಿ ಅಚ್ಚುಮೆಚ್ಚು ಎಂದು ಹೇಳಿದರು. ಇದನ್ನೂ ಓದಿ: ಎಲ್ಲೆಂದರಲ್ಲಿ ಕಸ ಹಾಕುವ ಮುನ್ನ ಇರಲಿ ಎಚ್ಚರ: ಡಿಕೆಶಿ
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಡಿಸಿಪಿಗಳಾದ ಸುಂದರ್ ರಾಜು, ಬಿಂದುಮಣಿ ಅವರು ಸೇರಿದಂತೆ ಮುಂತಾದವರು ಹಾಜರಿದ್ದರು.
