ಬೆಂಗಳೂರು: ಕನ್ನಡ ರಾಜ್ಯೋತ್ಸವವನ್ನು ಇಂದು ನಾಡಿನಾದ್ಯಂತ ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಅದರಂತೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿರಾಟ್ ನಗರದ ವೃತ್ತದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿ ನಂತರ ಮಾತನಾಡಿದ ಅವರು, ಕನ್ನಡ ನಮ್ಮ ಆತ್ಮ, ನಮ್ಮ ಗೌರವ ಮತ್ತು ನಮ್ಮ ಗುರುತು. ಇದನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಹೊಣೆಗಾರಿಕೆ ಎಂದರು. ಇದನ್ನೂ ಓದಿ: ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಕೆ.ಹೆಚ್ ಮುನಿಯಪ್ಪ
ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಮಂಜುನಾಥ್ ರೆಡ್ಡಿ ರವರು, ಬಿಜೆಪಿ ಮುಖಂಡರಾದ ನರೇಂದ್ರ ಬಾಬು ರವರು,ಶ್ರೀ ರಾಮಕೃಷ್ಣಪ್ಪ ರವರು, ಬೊಮ್ಮನಹಳ್ಳಿ ಮಂಡಲದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ರವರು, ಸ್ಥಳೀಯ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
