Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಾಂಗ್ಲಾ ವಲಸಿಗರ ಗಡಿಪಾರಿಗೆ ಅರವಿಂದ ಲಿಂಬಾವಳಿ ಹೇಳಿದ್ದೇನು?
  • Bangalore
  • Politics
  • State

ಬಾಂಗ್ಲಾ ವಲಸಿಗರ ಗಡಿಪಾರಿಗೆ ಅರವಿಂದ ಲಿಂಬಾವಳಿ ಹೇಳಿದ್ದೇನು?

Praja Vahini November 3, 2025 1 minute read
WhatsApp Image 2025-11-03 at 12.32.14
Spread the love

ಮಹದೇವಪುರ: ಇತ್ತೀಚಿನ ದಿನಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಅನ್ಯ ರಾಜ್ಯ ಹಾಗೂ ಅನ್ಯ ವಿದೇಶಿಗರ ವಲಸಿಗರಿಂದ ದಬ್ಬಾಳಿಕೆ ಹೆಚ್ಚಾಗಿ ಕಂಡುಬರುತ್ತದೆ ಅದಕ್ಕೆ ಉದಾಹರಣೆ ಎಂಬಂತೆ ಇದೀಗ ಮಹಾದೇವಪುರ ಕ್ಷೇತ್ರದಲ್ಲಿ ನಡೆದಿರುವ ಘಟನೆಗೆ ಸಾಕ್ಷಿಯಾಗಿದೆ.

ಹೌದು, ಮಹದೇವಪುರ ಕ್ಷೇತ್ರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿಗರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಹಲವಾರು ಬಾರಿ ಸರ್ಕಾರದ ಗಮನಕ್ಕೆ ತಂದರೂ, ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಮಾಜಿ ಸಚಿವ ಹಾಗೂ ಮಹದೇವಪುರ ಟಾಸ್ಕ್ ಫೋರ್ಸ್ ಅಧ್ಯಕ್ಷ ಅರವಿಂದ ಲಿಂಬಾವಳಿ ಬೇಸರ ವ್ಯಕ್ತಪಡಿಸಿದರು.

ಕ್ಷೇತ್ರದ ದೇವರ ಬಿಸಿನಹಳ್ಳಿಯ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ಬಾಂಗ್ಲಾದೇಶ ಮೂಲದ ವ್ಯಕ್ತಿಯೊಬ್ಬ ವಿಗ್ರಹಗಳನ್ನು ಹಾನಿಗೊಳಪಡಿಸಿದ್ದಾನೆಂಬ ಮಾಹಿತಿಯ ಆಧಾರದ ಮೇಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ದೇಶದಿಂದ ಅಕ್ರಮ ಬಾಂಗ್ಲಾದೇಶಿಗಳನ್ನು ಗಡಿಪಾರು ಮಾಡುವ ಬಗ್ಗೆ ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ, ಸಂಗ್ರಹಿಸಿದ ಮಾಹಿತಿಯನ್ನು ಮೇಲಧಿಕಾರಿಗಳಿಗೆ ಸಲ್ಲಿಸಲಾಗಿದೆ. ಇತ್ತೀಚೆಗಷ್ಟೇ ‘ಕಬೀರ್’ ಎಂದು ಗುರುತಿಸಲ್ಪಟ್ಟ ವ್ಯಕ್ತಿ ದೇವಸ್ಥಾನಕ್ಕೆ ನುಗ್ಗಿ ಜಯ–ವಿಜಯ ದ್ವಾರಪಾಲಕರ ವಿಗ್ರಹಗಳಿಗೆ ಹಾನಿ ಮಾಡಿದ್ದಾನೆ. ಸ್ಥಳೀಯರು ಆರೋಪಿಯನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದು, ತನಿಖೆಯಲ್ಲಿ ಅವನು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಬಾಂಗ್ಲಾದೇಶಿ ನಾಗರಿಕನೆಂಬುದು ತಿಳಿದುಬಂದಿದೆ. ಇದನ್ನೂ ಓದಿ: ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ: ಡಿಸಿಎಂ

ಅವನು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಯನ್ನು ಮಾದರಿಮಾಡಿಕೊಂಡಂತೆ ವರ್ತಿಸಿದ್ದಾನೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ. ಈ ಘಟನೆ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಸಾಧ್ಯತೆ ಇದ್ದುದರಿಂದ ಪ್ರಕರಣ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಎಂದು ಲಿಂಬಾವಳಿ ತಿಳಿಸಿದರು. ಮಹದೇವಪುರ ಕ್ಷೇತ್ರದ 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಅಕ್ರಮ ವಾಸಿಸುವವರ ಬಗ್ಗೆ ವಿವರಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಕೆಲವರನ್ನು ತೆರವುಗೊಳಿಸಿದರೂ, ಮತ್ತೆ ವಾಪಸ್ಸು ಬರುತ್ತಿರುವ ಘಟನೆಗಳು ಕಂಡುಬರುತ್ತಿವೆ ಎಂದು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ: ಡಿಸಿಎಂ
Next: ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ: ಸಿಎಂ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.