Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಹಾರ; ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ
  • Politics
  • State
  • ಮೈಸೂರು

ಬಿಹಾರ; ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ

Praja Vahini November 3, 2025 1 minute read
WhatsApp Image 2025-11-03 at 12.37.48
Spread the love

ಮೈಸೂರು: ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು (ಸೋಮವಾರ ನ. 03) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು ಎಂದರು. ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿವೆ. ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ. ಇದನ್ನೂ ಓದಿ: ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ: ಸಿಎಂ

ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿಮಾಹೆ 2000 ರೂ. ಗೃಹಲಕ್ಷ್ಮಿ ಗ್ಯಾರಂಟಿ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ.  ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು,ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನನಿರ್ಮೂಲನೆಯಾಗಿಲ್ಲ.  ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ಭರವಸೆಯಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ: ಸಿಎಂ
Next: ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿದವರ ಗುರುತಿಸಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ: ಸಿಎಂ

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.