ಬೆಂಗಳೂರು: ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದ ಗೌರವಾರ್ಥ ನವೆಂಬರ್ 15 ನ್ನು ಜನಜಾತೀಯ ಗೌರವ ದಿವಸವಾಗಿ ಆಚರಿಸಲಾಗುತ್ತಿದೆ. ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ಜಯಂತಿ ಅಂಗವಾಗಿ ಹಮ್ಮಿಕೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಭಗವಾನ್ ಬಿರ್ಸಾ ಮುಂಡಾ ಅವರು ಬುಡಕಟ್ಟು ಸಮುದಾಯಗಳ ಪರವಾಗಿ ಬ್ರಿಟೀಷರ ವಿರುದ್ಧ ಹೋರಾಡಿ, ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಬಸವರಾಜ್ ಮುತ್ತಿಮಡು, ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
