Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯ ಸರ್ಕಾರದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
  • Bangalore
  • Politics
  • State

ರಾಜ್ಯ ಸರ್ಕಾರದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

Praja Vahini November 5, 2025 1 minute read
WhatsApp Image 2025-11-05 at 16.23.42
Spread the love

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಪಿಯುಸಿ ಕಾಲೇಜ್ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಒಂದು ಹೊರ ಬಿದ್ದಿದೆ.

ಹೌದು…ಸರ್ಕಾರಿ ಪಿಯುಸಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇನ್ಮುಂದೆ ಬಿಸಿಊಟ ಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಈಗಾಗಲೇ 1ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿ ಊಟವನ್ನು ನೀಡಲಾಗುತ್ತಿದ್ದು ಅದರಂತೆ ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಸಹ ಮಧ್ಯಾಹ್ನದ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚಾಗಿ ಅದರಲ್ಲೂ ಕೂಡ ಗ್ರಾಮೀಣ ಪ್ರದೇಶದಲ್ಲಿ ಬಡ ಮಕ್ಕಳು ಹೆಚ್ಚಾಗಿ ಸರ್ಕಾರಿ ಕಾಲೇಜುಗಳಿಗೆ ಹೋಗುತ್ತಾರೆ. ಹಾಗಾಗಿ ಅವರಿಗೆ ಯಾವುದೇ ರೀತಿ ಊಟದ ತೊಂದರೆ ಆಗದಂತೆ ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಸಹ ಬಿಸಿ ಊಟ ನೀಡಲು ತೀರ್ಮಾನಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ತೀರ್ಮಾನಿಸಿದ್ದು, ನವೆಂಬರ್ 14 ಮಕ್ಕಳ ದಿನಾಚರಣೆದಂದು ಸರ್ಕಾರದಿಂದ ಅಧಿಕೃತ ಘೋಷಣೆಯಾಗುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿದ್ದಾರೆ.

2002-03ನೇ ಸಾಲಿನಲ್ಲಿ ಎಸ್​​ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಶಾಲೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ರಾಜ್ಯಾದ್ಯಂತ ಆರಂಭಿಸಲಾಗಿತ್ತು. ಆರಂಭದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಬಿಸಿಯೂಟ ನೀಡಲಾಗುತ್ತಿತ್ತು. ಬಳಿಕ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿತ್ತು.  ಶಾಲಾ ಮಕ್ಕಳಿಗೆ ಉತ್ತಮ ಪೋಷಕಾಂಶ ಭರಿತ ಆಹಾರವನ್ನು ಒದಗಿಸುವ ದೃಷ್ಟಿಯಿಂದ ಸರ್ಕಾರವು ಊಟದಲ್ಲಿ ತೊಗರಿಬೇಳೆ, ಸಂಸ್ಕರಿತ ತಾಳೆಎಣ್ಣೆ ಮತ್ತು ಕಡಲೆಬೇಳೆಗಳನ್ನೊಳಗೊಂಡ ಆಹಾರವನ್ನು ಒದಗಿಸುತ್ತಿದೆ. ಇದನ್ನೂ ಓದಿ:  ಡಿಕೆಶಿ ಭೇಟಿ ಮಾಡಿದ ಉಪೇಂದ್ರ

ಈಗಾಗಲೇ 10ನೇ ತರಗತಿಯ ವರೆಗೆ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿ ಊಟ ಸಿಗುತ್ತಿದೆ. ಇದೀಗ ಹೊಸದಾಗಿ ಪಿಯೂ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

About the Author

Praja Vahini

Editor

View All Posts

Spread the love

Post navigation

Previous: ಮುಕಳೆಪ್ಪ ವಿವಾಹ ಕೇಸ್;‌ ಲೋಕಾಯುಕ್ತ ದಾಳಿ
Next: ಕಬ್ಬು ಬೆಳೆಗಾರರು ಪ್ರತಿಭಟನೆ ವಿಚಾರದಲ್ಲಿ ರಾಜಕಾರಣ ಬೇಡ: ನಿಖಿಲ್ ಕುಮಾರಸ್ವಾಮಿ

Views:

48

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.