ಬೆಂಗಳೂರು: ಕಬ್ಬು ಬೆಳೆಗಾರರು ಪ್ರತಿಭಟನೆ ವಿಚಾರದಲ್ಲಿ ರಾಜಕಾರಣ ಮಾಡದೇ, ರೈತರ ಬೆನ್ನೆಲುಬಾಗಿ ನಿಲ್ಲುವ ಕೆಲಸ ಮಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಇಂದು (ಬುಧವಾರ ನವಂಬರ್ 5) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳಾಗಲಿ, ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚಕಾರ ಎತ್ತದೇ ಇರುವುದು ನೋವಿನ ಸಂಗತಿ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
ರೈತರನ್ನು ಉಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕಬ್ಬು ಬೆಳೆಗಾರರಿಗೆ ನ್ಯಾಯ ಒದಗಿಸಬೇಕು. ನಾವು ಕೂಡ ಶೀಘ್ರವಾಗಿ ಕಬ್ಬು ಬೆಳೆಗಾರನ್ನು ಭೇಟಿಯಾಗಿ, ಅವರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ಹೇಳಿದರು.
