ಬೆಂಗಳೂರು: ನೀತಿ ಆಯೋಗ, ಕರ್ನಾಟಕ ಸರ್ಕಾರ ಹಾಗೂ ಬೆಂಗಳೂರು ಜಲಮಂಡಳಿ ಸಹಯೋಗದಲ್ಲಿ ‘ಶುದ್ಧೀಕರಿಸಿದ ತ್ಯಾಜ್ಯ ನೀರಿನ ಮರುಬಳಕೆ’ ಕುರಿತು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಏರ್ಪಡಿಸಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರಕ್ಕೆ ನೀತಿ ಆಯೋಗದ ಸದಸ್ಯರಾದ ಡಾ.ವಿನೋದ್ ಕೆ.ಪೌಲ್ ಹಾಗೂ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಮಂತ್ರಾಲಯದ ಅಪರ ಕಾರ್ಯದರ್ಶಿಗಳಾದ ಡಿ.ತಾರಾ, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಬೆಂಗಳೂರು ಜಲಮಂಡಳಿಯ ಅಧ್ಯಕ್ಷರಾದ ಡಾ.ವಿ.ರಾಮಪ್ರಸಾತ್ ಮನೋಹರ್,ನೀತಿ ಆಯೋಗದ ಯೋಜನಾ ನಿರ್ದೇಶಕರಾದ ಯುಗಲ್ ಜೋಶಿ ಮತ್ತಿತರರು ಇದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಅವರಿಗೆ ವಯಸ್ಸಾಗಿಲ್ಲ, ಮುಂದಿನ ಚುನಾವಣೆಗಳನ್ನು ಅವರ ನಾಯಕತ್ವದಲ್ಲೇ ಎದುರಿಸುತ್ತೇವೆ: ಡಿ.ಕೆ. ಸುರೇಶ್
