Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ
  • Bangalore
  • Politics
  • State

ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ

Praja Vahini November 6, 2025 1 minute read
WhatsApp Image 2025-11-06 at 21.41.48
Spread the love

ಬೆಂಗಳೂರು: ಸಕ್ಕರೆ ರಫ್ತು ನಿಯಮದಲ್ಲಿ ಕೇಂದ್ರದ ನೀತಿ ಮತ್ತು FRP ನಿಗಧಿಯಲ್ಲಿ ಕೇಂದ್ರದ ತೀರ್ಮಾನದಿಂದ ಆಗಿರುವ ಅನಾಹುತದ ಕುರಿತು ಪ್ರಧಾನಿ ಜೊತೆ ಚರ್ಚಿಸಲು ಸಂಪುಟ ನಿರ್ಣಯ

ಕಳೆದ ಕೆಲವು ದಿನಗಳಿಂದ ಬೆಳಗಾವಿ, ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ನನಗೆ ಸ್ಪಷ್ಟ ಮಾಹಿತಿ ಇದೆ. ಹಾಗಾಗಿ ನಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿ ರೈತರು ಹಾಗೂ ಕಾರ್ಖಾನೆಗಳ ಮಾಲೀಕರ ಜೊತೆ ಚರ್ಚೆ ನಡೆಸುವಂತೆ ಸೂಚಿಸಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇಂದು ನಡೆದ ಸಚಿವ ಸಂಪುಟದಲ್ಲಿ ಮಾತನಾಡಿದ ಅವರು, ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿ ಶೇ. 11.25 ರಿಕವರಿ ಬಂದರೆ 3,200 ರೂ. ಹಾಗೂ ಶೇ.10.25 ರಿಕವರಿ ಬಂದರೆ 3100 ರೂ. ಗಳನ್ನು (ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) ಪಾವತಿಸುವಂತೆ ಕಾರ್ಖಾನೆಗಳ ಮಾಲೀಕರಿಗೆ ಮನವೊಲಿಸಿದ್ದಾರೆ. ಹಾಗೆಯೇ, ರೈತರಿಗೂ ಮನವೊಲಿಸುವ ಕೆಲಸ ಮಾಡಿದ್ದಾರೆ.

ಆದರೆ, ವಿರೋಧ ಪಕ್ಷಗಳವರು ಈ ವಿಚಾರವನ್ನು ರಾಜಕಾರಣಕ್ಕೆ ಬಳಸುತ್ತಿರುವುದರಿಂದ ವಿಷಯ ತುಸು ಗೊಂದಲಕರವಾಗಿದೆ.

ವಾಸ್ತವವಾಗಿ ನೋಡಿದರೆ, ಕಬ್ಬು ಮತ್ತು ಸಕ್ಕರೆ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರ ಅತ್ಯಂತ ನಗಣ್ಯವಾಗಿದೆ. ಕೇಂದ್ರ ಸರ್ಕಾರವು ಪ್ರತಿ ವರ್ಷ ‍FRP (Fair and Remunerative Price) ಯನ್ನು ನಿಗದಿಪಡಿಸುತ್ತದೆ. ಅದರಂತೆ, ದಿನಾಂಕ:06.05.2025 ರಂದು ಕೇಂದ್ರ ಸರ್ಕಾರದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯವು ಹೊರಡಿಸಿರುವ ಆದೇಶದ ಪ್ರಕಾರ ಈ ದರವನ್ನು ಕೇಂದ್ರ ಸರ್ಕಾರವೆ ನಿಗದಿ ಮಾಡಿದೆ. ಕೇಂದ್ರ ಸರ್ಕಾರವು ನಿಗದಿ ಮಾಡಿರುವ ದರ ರೈತರಿಗೆ ಲಭಿಸುತ್ತಿದೆಯೇ ಎಂದು ನೋಡಿಕೊಳ್ಳುವುದು ಹಾಗೂ ರೈತರಿಗೆ ತೂಕ, ಬೆಲೆ, ಹಾಗೂ ನಿಗದಿತ ಅವಧಿಯಲ್ಲಿ ಪಾವತಿ ಇತ್ಯಾದಿಗಳನ್ನು ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ.

ಇದು ಹಿಂದಿನಿಂದಲೂ ನಡೆದುಕೊಂಡು ಬಂದ ಪದ್ಧತಿ ಹಾಗೂ ಕಬ್ಬು ನಿಯಂತ್ರಣಕ್ಕೆ ಸಂಬಂಧಪಟ್ಟ ಕಾಯ್ದೆಯಲ್ಲಿ ಸ್ಪಷ್ಟವಾಗಿ ಪ್ರಸ್ತಾಪಿಸಲಾಗಿದೆ. ಇದನ್ನೂ ಓದಿ: ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ

FRP (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ಯನ್ನು ನಿಗದಿಪಡಿಸುವುದಷ್ಟೆ ಕೇಂದ್ರ ಸರ್ಕಾರದ ಜವಾಬ್ದಾರಿಯಲ್ಲ. ಸಕ್ಕರೆ ಮೇಲಿನ ನಿಯಂತ್ರಣವನ್ನು ಅಗತ್ಯ ವಸ್ತುಗಳ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಹೊಂದಿರುತ್ತದೆ. ಹಿಂದೆ ಯುಪಿಎ ಸರ್ಕಾರದ ಅವಧಿಯಿಂದಲೂ 2017-18 ರವರೆಗೆ ರಿಕವರಿ ಪ್ರತಿ ಕ್ವಿಂಟಾಲಿಗೆ ಶೇ. 9.5 ರಷ್ಟನ್ನು ನಿಗದಿಪಡಿಸಲಾಗುತ್ತಿತ್ತು. 2018-19 ನಿಂದ 2021-22 ರವರೆಗೆ ಅದನ್ನು ಶೇ.10 ಕ್ಕೆ ಹೆಚ್ಚಿಸಲಾಯಿತು. 2022-23 ರಿಂದ ಈಚೆಗೆ ಎಫ್.ಆರ್.ಪಿ. ಯನ್ನು ಶೇ. 10.25 ಕ್ಕೆ ಏರಿಕೆ ಮಾಡಲಾಗಿದೆ. ಈ ವಿಚಾರದಲ್ಲೂ ನಮ್ಮ ರೈತರಿಗೆ ಅನ್ಯಾಯ ಮಾಡಲಾಗಿದೆ.

ಸಕ್ಕರೆಗೆ 2019 ರಲ್ಲಿ ಎಂ.ಎಸ್.ಪಿ ಯನ್ನು ಕಡೆಯದಾಗಿ ನಿಗದಿಪಡಿಸಲಾಯಿತು. ಆಗ, ಪ್ರತಿ ಕೆ.ಜಿ. ಗೆ 31 ರೂ. ನಿಗದಿ ಮಾಡಲಾಗಿತ್ತು.  ಆನಂತರ ಎಂ.ಎಸ್.ಪಿ ಯನ್ನು ಪರಿಷ್ಕರಿಸಲಿಲ್ಲ. ಜೊತೆಗೆ, ಕಳೆದ ಕೆಲವು ವರ್ಷಗಳಿಂದಲೂ ಕೇಂದ್ರ ಸರ್ಕಾರವು ಸಕ್ಕರೆ ರಫ್ತನ್ನು ನಿಲ್ಲಿಸಿದೆ. ಕಳೆದ ವರ್ಷ ಇಡೀ ದೇಶಕ್ಕೆ ಕೇವಲ 10 ಲಕ್ಷ ಮೆಟ್ರಿಕ್ ಟನ್ ರಫ್ತು ಮಾಡಲು ಮಾತ್ರ ಅವಕಾಶ ನೀಡಲಾಗಿತ್ತು. ಕರ್ನಾಟಕವೊಂದರಲ್ಲೆ 41 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗಿತ್ತು.  ಈ ಕಾರಣದಿಂದಲೂ ರೈತರಿಗೆ ಸಮಸ್ಯೆಯಾಗುತ್ತಿದೆ.

ಇದಷ್ಟೆ ಅಲ್ಲದೆ, ಎಥನಾಲ್ ವಿಚಾರದಲ್ಲೂ ಸಹ ಕೇಂದ್ರ ಸರ್ಕಾರವು ತಾರತಮ್ಯ ಧೋರಣೆಯನ್ನು ಅನುಸರಿಸುತ್ತಿದೆ. ಕರ್ನಾಟಕದಲ್ಲಿ 270 ಕೋಟಿ ಲೀಟರ್‌ ಉತ್ಪಾದನಾ ಸಾಮರ್ಥ್ಯ ಇದ್ದರೂ ಸಹ 2024-25 ರಲ್ಲಿ  47 ಕೋಟಿ ಲೀಟರ್‌ಗಳನ್ನು ತೈಲ ಕಂಪನಿಗಳಿಗೆ ಖರೀದಿ ಮಾಡಲು ಹಂಚಿಕೆ ಮಾಡಲಾಗಿದೆ.

ಇದು ಕೇಂದ್ರ ಸರ್ಕಾರವು ರಾಜ್ಯದ ರೈತರ ಬದುಕಿನೊಂದಿಗೆ ಆಡುತ್ತಿರುವ ಚೆಲ್ಲಾಟಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ತೂಕದಲ್ಲಿ ನಡೆಯುತ್ತಿದ್ದ ಮೋಸವನ್ನು ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲೂ ಡಿಜಿಟಲ್ ತೂಕ ಯಂತ್ರವನ್ನು ಅಳವಡಿಸಲಾಗಿದೆ. ಸರ್ಕಾರದ ವತಿಯಿಂದಲೇ 11 ಜಾಗಗಳಲ್ಲಿ ಡಿಜಿಟಲ್ ತೂಕ ಯಂತ್ರಗಳನ್ನು ಅಳವಡಿಸಲು ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ
Next: ವರದಿಗಾರರ ಕೂಟದ ಲಾಂಛನ ಬಿಡುಗಡೆ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.