ಬೆಂಗಳೂರು: ನ್ಯಾಷನಲ್ ಕ್ರಶ್ ರಶ್ಮಿಕ ಮಂದಣ್ಣ ಹಾಗೂ ವಿಜಯ್ ದೇವರುಕೊಂಡ ಅವರಿಬ್ಬರ ನಿಶ್ಚಿತಾರ್ಥದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ಚರ್ಚೆಯಾಗುತ್ತಿದೆ.
ಈಗಾಗಲೇ ರಶ್ಮಿಕ ಹಾಗೂ ವಿಜಯ್ ದೇವರಕೊಂಡ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿರುವ ವಿಷಯ ಎಲ್ಲರಿಗೂ ಗೊತ್ತಿರುವ ಸಂಗತಿ. ಅದರಂತೆ ಈಗಾಗಲೇ ಇಬ್ಬರ ಮನೆಯಲ್ಲಿ ಪರಸ್ಪರ ಒಪ್ಪಿಕೊಂಡು ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದಾರೆ. ಇದಾದ ಬಳಿಕ ಇದೀಗ ಮದುವೆಗೆ ದಿನಾಂಕ ಫಿಕ್ಸ್ ಆಗಿದೆ ಎಂದು ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಯಾಗುತ್ತಿದೆ
ಯೆಸ್…ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಮುಂದಿನ ವರ್ಷ ಫೆಬ್ರವರಿ 26ರಂದು ಮದುವೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಮದುವೆ ಸ್ಥಳವಾಗಿ ರಾಜಸ್ಥಾನದ ಉದಯಪುರ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ರಾಜಸ್ಥಾನದ ಕೋಟೆ-ಹೋಟೆಲ್‌ಗಳು ಮದುವೆಗಳಿಗೆ ವಿಶಿಷ್ಟ ಆಕರ್ಷಣೆ ನೀಡುತ್ತವೆ, ಖಾಸಗಿತನವನ್ನೂ ಕಾಪಾಡುತ್ತವೆ. ಇದನ್ನೂ ಓದಿ: ಖಾಕಿ ಧರಿಸಿದ ಡಿಂಪಲ್ ಕ್ವೀನ್
ರಶ್ಮಿಕಾ ಮಂದಣ್ಣ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಮದುವೆಯ ನಂತರ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಪ್ರಮಾಣ ಕಡಿಮೆಯಾಗಬಹುದೇ ಎಂಬ ಪ್ರಶ್ನೆಯೂ ಅಭಿಮಾನಿಗಳಲ್ಲಿ ಮೂಡಿದೆ.
