Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾವು ರೈತರ ಪರವಾಗಿ ನಿಲ್ಲುತ್ತೇವೆ: ಸಿಎಂ
  • Bangalore
  • Politics
  • State

ನಾವು ರೈತರ ಪರವಾಗಿ ನಿಲ್ಲುತ್ತೇವೆ: ಸಿಎಂ

Praja Vahini November 7, 2025 1 minute read
WhatsApp Image 2025-11-07 at 13.31.27
Spread the love

ಬೆಂಗಳೂರು: ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ.  ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್ಪಿ ನಿಗದಿಪಡಿಸಿದೆ. ಈ ಎಫ್ಆರ್ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಇಂದು ವಿಧಾನಸೌಧ ಸಭಾಂಗಣದಲ್ಲಿ  ನಡೆದ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು. ಇದನ್ನೂ ಓದಿ:    ಇದು ‘ಪಿಕ್ ಪಾಕೆಟ್’ ಹಾಗೂ ಸುಲಿಗೆ ಸರ್ಕಾರ: ಟಿ.ಎ. ಶರವಣ ವಾಗ್ದಾಳಿ

ಸಕ್ಕರೆ ಕಾರ್ಖಾನೆ ಮಾಲಿಕರ ಪರವಾಗಿ ಮುರುಗೇಶ್ ನಿರಾಣಿ ಮಾತನಾಡಿ, ಎಲ್ಲಾ ಸರ್ಕಾರಗಳಲ್ಲೂ ಕಬ್ಬು ಬೆಳೆಗಾರರ ಸಮಸ್ಯೆ ಮುಂದುವರೆಯುತ್ತಾ ಬಂದಿದೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದವನ್ನು ರಾಜ್ಯ ಸರ್ಕಾರ ನವೀಕರಣ ಮಾಡಿರುವುದಿಲ್ಲ. ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆಯವರಿಂದ ಖರೀದಿಸುವ ವಿದ್ಯುತ್ ಪ್ರತಿ ಯುನಿಟ್ಗೆ ರೂ. 6 ಪಾವತಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಒಪ್ಪಂದ ಮಾಡಬೇಕಿದೆ. ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸಿರುವುದನ್ನು ಕೈಬಿಡಬೇಕು. ಸಕ್ಕರೆ ಕಾರ್ಖಾನೆಗಳ ನಡುವಿನ ಅಂತರ ಕನಿಷ್ಠ 25 ಕಿಮೀ ನಿಗದಿಪಡಿಸಬೇಕು. ಏವಿಯೇಷನ್ ಇಂಧನಕ್ಕೆ ಎಥೆನಾಲ್ ಮಿಶ್ರಣ ಅನುಮತಿಯನ್ನು ಆದಷ್ಟು ಬೇಗನೆ ನೀಡುವಂತೆ ಪ್ರಧಾನಿ ಅವರಿಗೆ ಮನವಿ ಮಾಡಬೇಕು. ಪ್ರಸ್ತುತ ರೈತರಿಗೆ ಎಫ್ಆರ್ಪಿ ಪ್ರಕಾರ ದರ ನೀಡಲಾಗುವುದು. ಹೆಚ್ವುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ ಎಂದರು.

ಎಥೆನಾಲ್ ಎಂಎಸ್ಪಿ ಹೆಚ್ಚಳ ಕುರಿತು ಕೇಂದ್ರಕ್ಕೆ ಮನವಿ ಮಾಡಿದರೂ ಇದುವರೆಗೆ ಹೆಚ್ಚಳ ಮಾಡಿಲ್ಲ. ಇದರಿಂದ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ. ಇದೇ ರೀತಿ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿರುವುದರಿಂದ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕವಾಗಿ ನಷ್ಟ ಉಂಟಾಗಿದೆ. ಇಡೀ ದೇಶಕ್ಕೆ ಕೇವಲ 10ಲಕ್ಷ ಮೆ. ಟನ್ ಮಾತ್ರ ರಫ್ತಿಗೆ ಅನುಮತಿ ನೀಡಲಾಗಿದೆ. ಕಳೆದ ಆರು ವರ್ಷಗಳಿಂದ ಸಕ್ಕರೆ ದರವನ್ನು ಸಹ ಪರಿಷ್ಕರಿಸಿಲ್ಲ. ಆದರೆ ಕಬ್ಬಿನ ದರ ಪ್ರತಿ ವರ್ಷ ಹೆಚ್ಚುತ್ತಾ ಹೋಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಸಕ್ಕರೆ ಕಾರ್ಖಾನೆಗಳಿಗೆ ಈಗ ಎಫ್ಆರ್ಪಿ ಪ್ರಕಾರ ರೈತರಿಗೆ ಪಾವತಿ ಮಾಡಲು ಕಷ್ಟ ಪಡಬೇಕಾದ ಪರಿಸ್ಥಿತಿಯಿದೆ. ಆದರೆ ಈ ದರ ಕಾನೂನಾತ್ಮಕವಾಗಿ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಪಾವತಿಸುತ್ತಿವೆ ಎಂದು ಸಕ್ಕರೆ ಕಾರ್ಖಾನೆ ಮಾಲಿಕರ ಸಂಘದ ಅಧ್ಯಕ್ಷರು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous:   ಇದು ‘ಪಿಕ್ ಪಾಕೆಟ್’ ಹಾಗೂ ಸುಲಿಗೆ ಸರ್ಕಾರ: ಟಿ.ಎ. ಶರವಣ ವಾಗ್ದಾಳಿ
Next: ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ಆಲಸ್ಯ ಮಾಡಿದ್ದಾರೆ: ಬಿವೈವಿ

Views:

67

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.