Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚುನಾವಣಾ ಆಯೋಗವನ್ನು ಮೋದಿ ಕೇಂದ್ರದ ಅಡಿಯಾಳು ಮಾಡಿಸಿಕೊಂಡಿದ್ದಾರೆ: ಸಿಎಂ
  • Bangalore
  • Politics
  • State

ಚುನಾವಣಾ ಆಯೋಗವನ್ನು ಮೋದಿ ಕೇಂದ್ರದ ಅಡಿಯಾಳು ಮಾಡಿಸಿಕೊಂಡಿದ್ದಾರೆ: ಸಿಎಂ

Praja Vahini November 8, 2025 1 minute read
WhatsApp Image 2025-11-08 at 14.20.26
Spread the love

ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

KPCC ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ದಾಖಲೆಗಳನ್ನು, ಮತಗಳ್ಳತನದ ವ್ಯವಸ್ಥಿತ ಷಡ್ಯಂತ್ರ ಮತ್ತು ವ್ಯವಸ್ಥಿತ ಕಾರ್ಯತಂತ್ರದ ದಾಖಲೆಗಳನ್ನು ವಿವರಿಸಿ ಮಾತನಾಡಿದ ಅವರು, ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದರು.

ಬಿಜೆಪಿ ಮತಗಳ್ಳತನದ ಮೂಲಕ‌ ಅನೇಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ನಿರಂತರ ಅಧ್ಯಯನ, ತಪಸಣೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ಎಂದು ವಿವರಿಸಿದರು.

ಸಂವಿಧಾನಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ಪ್ರಜಾಪ್ರಭುತ್ವಕ್ಕೆ ಎಸಗಿದ ವಂಚನೆ. ರಾಹುಲ್ ಗಾಂಧಿಯವರು, ಬೆಂಗಳೂರು ಕೇಂದ್ರ ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನವನ್ನು ಸ್ಪಷ್ಟವಾಗಿ, ದಾಖಲೆ ಸಮೇತ ಬಯಲಿಗೆ ಎಳೆದು ದಾಖಲೆಗಳನ್ನು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯ ಸ್ಥಾನಮಾನವನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದಾರೆ. ಪ್ರಭುತ್ವ ಚುನಾವಣಾ ಪ್ರಕ್ರಿಯಿಯಲ್ಲಿ ಮೂಗು ತೂರಿಸಬಾರದು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ನಮ್ಮ ಸಂವಿಧಾನ ರೂಪಿಸಿದೆ. ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ ಎಂದರು. ಇದನ್ನೂ ಓದಿ: ಕನಕದಾಸರು ವಿಶ್ವಮಾನವರು: ಸಿಎಂ  ಸಿದ್ದರಾಮಯ್ಯ

ಆದ್ದರಿಂದ ನಾವು ಸಂವಿಧಾನದ ಮತ್ತು ಪ್ತಜಾಪ್ರಭುತ್ವ ಕಾಪಾಡಲು ಕಾಂಗ್ರೆಸ್ ಪಕ್ಷದಿಂದ ಕೋಟಿಗೂ ಅಧಿಕ ಮಂದಿಯ ಸಹಿ ಸಂಗ್ರಹ ಮಾಡಲಾಗಿದೆ. ಇದನ್ನು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೂ ನೀಡಲಾಗುವುದು ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೂ ಸಚಿವರೂ ಆದ ಸತೀಶ್ ಜಾರಕಿಹೊಳಿ, ಪಕ್ಷದ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ಸಲೀಂ ಅಹಮದ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಸೇರಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು‌.

About the Author

Praja Vahini

Editor

View All Posts

Spread the love

Post navigation

Previous: ಕನಕದಾಸರು ವಿಶ್ವಮಾನವರು: ಸಿಎಂ  ಸಿದ್ದರಾಮಯ್ಯ
Next: ನಮ್ಮ ಕಾಂಗ್ರೆಸ್ ಪಕ್ಷ ಬಿಜೆಪಿ ಪಕ್ಷದ ತರ ಅಲ್ಲ: ಚಲುವರಾಯ ಸ್ವಾಮಿ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.