ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ಈಗಾಗಲೇ ದರ್ಶನ್ ವಿಚಾರದಲ್ಲಿ ಹೊರಬಿದ್ದಿದ್ದು ಮತ್ತೆ ಇದೀಗ ಪರಪ್ಪನ ಜೈಲಿನ ವಿಡಿಯೋ ಒಂದು ಹೊರ ಬಿದ್ದಿದೆ.
ಹೌದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಕುಡಿದು ಕೊಪ್ಪಳಿಸುತ್ತಿರುವ ವಿಡಿಯೋ ಒಂದು ವೈರಲ್ ಆಗಿದ್ದು, ಈ ವಿಡಿಯೋವನ್ನು ದರ್ಶನ್ ಆಪ್ತ ಧನ್ವೀರ್ ಅವರು ವೈರಲ್ ಮಾಡಿದ್ದಾರೆ ಎಂದು ಸಿಸಿಬಿ ಅಧಿಕಾರಿಗಳು ಇದೀಗ ಧನ್ವೀರ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ.
ನಿನ್ನೆ (ಭಾನುವಾರ ನವಂಬರ್ 9) ರಂದು ಸುಮಾರು ನಾಲ್ಕು ತಾಸಿನವರೆಗೂ ಧನ್ವೀರವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇಂದು ಕೂಡ ಧನ್ವೀರ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಈ ವಿಡಿಯೋಗಳನ್ನು ಧನ್ವೀರ್ ಬಿಡುಗಡೆ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದನ್ನೂ ಓದಿ: ಬಿಗ್ ಬಾಸ್ ನ ಮಾಜಿ ಸ್ಪರ್ಧಿಗೆ ಕೂಡಿಬಂತು ಕಂಕಣ ಭಾಗ್ಯ
ಭಾನುವಾರದಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಧನ್ವೀರ್ ಅವರ ಮೊಬೈಲ್ ಅನ್ನು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ಅನುಮಾನದ ಮೇರೆಗೆ ಧನ್ವೀರ್ ಅವರನ್ನು ಸಿಸಿಬಿ ಡ್ರಿಲ್ ಮಾಡುತ್ತಿದ್ದು ಸೋಮವಾರವೂ ಸಿಸಿಬಿ ವಶದಲ್ಲೇ ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
