Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೆಹಲಿಯಲ್ಲಿ ಭೀಕರ ಸ್ಫೋಟ; ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್
  • Bangalore
  • Crime
  • National
  • State

ದೆಹಲಿಯಲ್ಲಿ ಭೀಕರ ಸ್ಫೋಟ; ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್

Praja Vahini November 11, 2025 1 minute read
WhatsApp Image 2025-11-11 at 10.40.15
Spread the love

ಬೆಂಗಳೂರು: ದೆಹಲಿಯ ಕೆಂಪುಕೋಟೆಯ ಬಳಿ ನಿನ್ನೆ (ಸೋಮವಾರ ನ. 10) ಸಂಜೆ ಸುಮಾರು 6:56 ರ ವೇಳೆ ಭೀಕರ ಸ್ಫೋಟಕಗೊಂಡಿದ್ದು ಇದರಲ್ಲಿ ಸುಮಾರು 10 ಜನ ಬಲಿಯಾಗಿದ್ದು 30ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದೆ.

ಇನ್ನು ಪ್ರಾಥಮಿಕ ತನಿಖೆಯಲ್ಲಿ ಇದು ಭಯೋತ್ಪಾದಕ ದಾಳಿಯಾಗಿರಬಹುದು ಅನ್ನೋ ಶಂಕೆ ವ್ಯಕ್ತವಾಗಿದೆ ಎಂದು ವರದಿಗಳು ತಿಳಿಸಿವೆ.

ದೆಹಲಿಯ ಕೆಂಪುಕೋಟೆ ಬಳಿ ಭೀಕರ ಸ್ಫೋಟಕ ಗೊಂಡ ಬಳಿಕ ದೇಶದಲ್ಲಿ ಪ್ರಮುಖ ಸ್ಥಳವಾದ ರೈಲು ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಕಟ್ಟೆಚ್ಚರವಾಗಿ ತಪಾಸನೆಯನ್ನು ಕೈಗೊಳ್ಳಲಾಗುತ್ತಿದೆ.

ಅಲ್ಲದೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ವಿಮಾನ ನಿಲ್ದಾಣದ ಒಳಗೂ ಹೊರಗೂ ಹದ್ದಿನಕಣ್ಣು ನಿಗಾ ಇಡಲಾಗಿದೆ. ಏರ್‌ಪೋರ್ಟ್‌ಗೆ ಬರುವ ಹಾಗೂ ತೆರಳುವ ವಾಹನಗಳ ತಪಾಸಣೆ ಜೋರಾಗಿದ್ದು, ಶಸ್ತ್ರಸಜ್ಜಿತ CISF ಸಿಬ್ಬಂದಿ ಹೆಚ್ಚುವರಿ ನಿಯೋಜನೆ ಮಾಡಲಾಗಿದೆ. ಪ್ಯಾಟ್ರೋಲಿಂಗ್ ಗಸ್ತು ತೀವ್ರಗೊಳಿಸಲಾಗಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಯ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಇದ್ನನೂ ಓದಿ: ಸೈಮಾ ಸಮ್ಮೇಳನಕ್ಕೆ ಸಚಿವರಿಗೆ ಆಹ್ವಾನ

ಇನ್ನು ಮೆಜೆಸ್ಟಿಕ್ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳ ಸುತ್ತಮುತ್ತ ಭದ್ರತೆ ಬಿಗಿಗೊಳಿಸಲಾಗಿದೆ. ಶ್ವಾನದಳದಿಂದ ರೈಲು ನಿಲ್ದಾಣಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ಮೆಜೆಸ್ಟಿಕ್ ಪ್ರದೇಶದಲ್ಲಿ ಕೆಎಸ್‌ಆರ್‌ಪಿ ತುಕಡಿಗಳು ನಿಯೋಜನೆಗೊಂಡಿದ್ದು, ಬಸ್ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚುವರಿ ಪೊಲೀಸರು ಕಾವಲು ನಿಂತಿದ್ದಾರೆ. ನಗರ ಪೊಲೀಸ್ ಆಯುಕ್ತರ ಸೂಚನೆಯಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ಕ್ರಮಗಳು ಕೈಗೊಳ್ಳಲಾಗಿದ್ದು, ನಗರಾದ್ಯಂತ ಎಚ್ಚರ ವಾತಾವರಣ ನಿರ್ಮಾಣವಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಸೈಮಾ ಸಮ್ಮೇಳನಕ್ಕೆ ಸಚಿವರಿಗೆ ಆಹ್ವಾನ
Next: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮಿ ಸಂಘದ ಪ್ರಮಾಣ ಪತ್ರ ಹಸ್ತಾಂತರ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.