Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮಿ ಸಂಘದ ಪ್ರಮಾಣ ಪತ್ರ ಹಸ್ತಾಂತರ
  • Bangalore
  • Bangalore
  • Front news
  • Politics
  • State

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮಿ ಸಂಘದ ಪ್ರಮಾಣ ಪತ್ರ ಹಸ್ತಾಂತರ

Praja Vahini November 11, 2025 1 minute read
b1f6461c-9570-4a97-a550-07e82b7deafb
Spread the love

 

ಬೆಂಗಳೂರು: ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು.

ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.

ಸಚಿವರ ಕನಸಿನ ಯೋಜನೆ

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ.
ನವೆಂಬರ್‌ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.

ಮಹಿಳೆಯರ ಸುರಕ್ಷತೆಗಾಗಿ ಅಕ್ಕಾಪಡೆಯನ್ನು ಸಜ್ಜುಗೊಳಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಮನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಂದು ಸ್ವರೂಪ ತಂದಿದ್ದಾರೆ.

ಸುಮಾರು 1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ 52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಸಲುವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಕನಸಿನ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ.

ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.‌

ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಕ್ಷ್ಮೀಪತಯ್ಯ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ‌ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ನಟರಾಜ್, ಎಂ.ಜಿ.ಪಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ದೆಹಲಿಯಲ್ಲಿ ಭೀಕರ ಸ್ಫೋಟ; ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್
Next: ಸಚಿವ ದರ್ಶನಾಪುರ ಅವರಿಗೆ ಡಿಸಿಎಂ ಸ್ಥಾನ ಕೊಡ

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.