ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೆಟ್ರೋ ಮಾರ್ಗವನ್ನು ಅವಲಂಬಿಸುತ್ತಾರೆ.
ಆದರೆ ಮೆಟ್ರೋ ಮಾರ್ಗದಲ್ಲಿಯೇ ಆಗಾಗ ಸಮಸ್ಯೆ ಕಂಡು ಬರುತ್ತಿರುವುದು ಹೆಚ್ಚಾಗಿ ಕಂಡುಬರುತ್ತದೆ. ಅದರಂತೆ ಇದೀಗ ಮತ್ತೆ ಎಲ್ಲೋ ಮಾರ್ಗದಲ್ಲಿ ತಾಂತ್ರಿಕ ದೋಷದಿಂದ ಮೆಟ್ರೋ ಸಂಚಾರ ಸ್ಥಗಿತವಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಇತ್ತೀಚಿಗಷ್ಟೇ ಪ್ರಾರಂಭವಾಗಿರುವ ಎಲ್ಲೋ ಮಾರ್ಗ ದಲ್ಲಿ ತಾಂತ್ರಿಕ ಸಂಸ್ಥೆ ಕಂಡುಬಂದಿರುವುದು ಸಾರ್ವಜನಿಕರಿಗೆ ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಬಿಎಂಆರ್ಸಿಎಲ್ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಇದರ ಪರಿಣಾಮವಾಗಿ ಯೆಲ್ಲೋ ಲೈನ್ನಲ್ಲಿ ರೈಲು ಸಂಚಾರ ವಿಳಂಬವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಸೈಮಾ ಸಮ್ಮೇಳನಕ್ಕೆ ಸಚಿವರಿಗೆ ಆಹ್ವಾನ
ಜನರು ಕಚೇರಿಗೆ ಹಾಗೂ ಕೆಲಸಕ್ಕೆ ತೆರಳುವ ಪೀಕ್ ಅವರ್ ಸಮಯದಲ್ಲೇ ಈ ತೊಂದರೆ ಉಂಟಾಗಿರುವುದರಿಂದ ಪ್ರಯಾಣಿಕರಿಗೆ ಅನಾನುಕೂಲ ಉಂಟಾಗಿದೆ. “ಪ್ರಯಾಣಿಕರಿಗೆ ಉಂಟಾದ ತೊಂದರೆಗಾಗಿ ವಿಷಾದಿಸುತ್ತೇವೆ. ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳಲಾಗಿದೆ,” ಎಂದು ಬಿಎಂಆರ್ಸಿಎಲ್ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ತಿಳಿಸಿದೆ.
