ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಅವರ ನಡುವೆ ಪ್ರೇಮ ಮೂಡಿ ಈಗಾಗಲೇ ಇವರಿಬ್ಬರು ಮದುವೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು, ಇದೀಗ ಇದರ ಬಗ್ಗೆ ಸ್ಪಷ್ಟತೆ ನಟಿ ರಶ್ಮಿಕಾ ಮಂದಣ್ಣ ಅವರು ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಹೌದು, ರಶ್ಮಿಕಾ ಮಂದಣ್ಣ ಅವರು ಇತ್ತೀಚಿಗಷ್ಟೇ ವಿಜಯ್ ದೇವರಕೊಂಡ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, 2026 ಫೆಬ್ರುವರಿಯಲ್ಲಿ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳಿಗೆ ಇದೀಗ ರಶ್ಮಿಕಾ ಮಂದಣ್ಣ ತೆರೆಯಳೆಯಲು ಸಜ್ಜಾಗಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್!?
ಯೆಸ್…ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಇಂದು (ಬುಧವಾರ ನ.12) ಹೈದರಾಬಾದ್ನಲ್ಲಿ ಇಬ್ಬರು ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ. ಈ ಕಾರ್ಯಕ್ರಮವನ್ನು ರಶ್ಮಿಕಾ ಅಭಿನಯದ ‘ದಿ ಗರ್ಲ್ಫ್ರೆಂಡ್’ ಚಿತ್ರಕ್ಕೆ ಬಂದಿರುವ ಉತ್ತಮ ಪ್ರತಿಕ್ರಿಯೆಯ ಹಿನ್ನೆಲೆಯಲ್ಲಿ ಆಯೋಜಿಸಲಾಗಿದೆ ಎನ್ನಲಾಗಿದೆ.
‘ದಿ ಗರ್ಲ್ಫ್ರೆಂಡ್’ ಚಿತ್ರ ನವೆಂಬರ್ 7 ರಂದು ಬಿಡುಗಡೆಯಾಗಿ ಉತ್ತಮ ವಿಮರ್ಶೆಗಳನ್ನು ಗಳಿಸಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರಚಾರ ಚಟುವಟಿಕೆಗಾಗಿ ಪತ್ರಿಕಾಗೋಷ್ಠಿ ಆಯೋಜಿಸಿದ್ದು, ಅದಕ್ಕೆ ವಿಜಯ್ ದೇವರಕೊಂಡ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.
ಆದರೆ ಇಬ್ಬರು ಮಾಧ್ಯಮಗಳ ಎದುರು ಬಂದರೆ ನಿಶ್ಚಿತಾರ್ಥ ಮತ್ತು ಮದುವೆ ವಿಚಾರ ತಪ್ಪದೇ ಕೇಳಿಬರಲಿದೆ. ಇದರ ಬಗ್ಗೆ ಇಬ್ಬರೂ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
