ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತು ಜೋರಾಗಿ ಕೇಳುತ್ತಿರುವ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವಂಬರ್ 15ರಂದು ದೆಹಲಿ ಪ್ರವಾಸ ಕೈಗೊಂಡಿದ್ದು ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಎಲ್ಲರಲ್ಲೂ ಮೂಡಿದೆ.
ಇನ್ನು ಶಾಸಕ ಬಸವರಾಜ ರಾಯರೆಡ್ಡಿ ಅವರು ಸಿಎಂ ದೆಹಲಿ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಅವರು ಅಕ್ಟೋಬರ್ 15ರಂದು ದೆಹಲಿಗೆ ತೆರಳುತ್ತಿದ್ದು, ನಾನೂ ಕೂಡ ಅವರೊಂದಿಗೆ ತೆರಳುತ್ತೇನೆ ಎಂದು ರಾಯರೆಡ್ಡಿ ಹೇಳಿದ್ದಾರೆ. ಆದರೆ, ಈ ಭೇಟಿ ಸಚಿವ ಸಂಪುಟ ವಿಸ್ತರಣೆ ಚರ್ಚೆಗಾಗಿ ಅಲ್ಲ. ಅಕ್ಟೋಬರ್ 16ರಂದು ಕಪಿಲ್ ಸಿಬಲ್ ಬಿಡುಗಡೆ ಮಾಡಲಿರುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಲು ಈ ಭೇಟಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಯಾರನ್ನೆಲ್ಲ ಸಚಿವರನ್ನಾಗಿ ಮಾಡಬೇಕು ಅಥವಾ ಯಾರನ್ನು ತೆಗೆಯಬೇಕು ಎಂಬುದು ಮುಖ್ಯಮಂತ್ರಿಗಳ ಪರಮಾಧಿಕಾರ ಮತ್ತು ಪಕ್ಷದ ವರಿಷ್ಠರ ಅಧಿಕಾರಕ್ಕೆ ಒಳಪಟ್ಟಿದೆ. ಈ ವಿಷಯದಲ್ಲಿ ನಾನು ಹೊಸಬನಲ್ಲ, 40 ವರ್ಷಗಳ ಕಾಲ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸೈಮಾ ಸಮ್ಮೇಳನಕ್ಕೆ ಸಚಿವರಿಗೆ ಆಹ್ವಾನ
ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಅವರು, ಮಾಧ್ಯಮಗಳಲ್ಲಿ ಬರುವ ಇಂತಹ ವಿಷಯಗಳು ಕೇವಲ ಊಹಾಪೋಹ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಶಾಸಕಾಂಗ ಪಕ್ಷದ ಸಭೆ ಕರೆದು ಎಲ್ಲ ಶಾಸಕರ ಒಪ್ಪಿಗೆಯ ನಂತರವೇ ಮುಖ್ಯಮಂತ್ರಿಯ ಬದಲಾವಣೆ ಸಾಧ್ಯ ಎಂದರು.
