Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಿಂದೆ ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು: ಸಿಎಂ
  • Bangalore
  • Politics
  • State
  • Uncategorized

ಹಿಂದೆ ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು: ಸಿಎಂ

Praja Vahini November 13, 2025
WhatsApp Image 2025-11-13 at 14.46.42
Spread the love

ಹಿಂದೆ ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು. ನಾನು ಹೆದರಲಿಲ್ಲ. ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ ಬೆದರಿಕೆ ಇತ್ತು. ಆದರೂ ನಾನು ಹೆದರದೆ ಗ್ರಾಮೀಣ ಭಾಗದ ಸಂಘದ ನಿರ್ದೇಶಕರ ಬೆಂಬಲದಲ್ಲಿ ದಾವಣಗೆರೆಯ ಮಲ್ಲಪ್ಪ ಅವರನ್ನು ರೌಡಿ ಪುಟ್ಟಸ್ವಾಮಿ ವಿರುದ್ಧ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಿಲ್ಲಿಸಿದೆ. ಪುಟ್ಟಸ್ವಾಮಿ ನ್ಯಾಯಾಲಯಕ್ಕೆ ಹೋದರೂ ತೀರ್ಪು ನಮ್ಮ ಪರವಾಗಿ ಬಂತು. ಹೀಗೆ ಸಂಘವನ್ನು ನಾನು ಉಳಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ನಿನ್ನೆ (ಬುಧವಾರ ನ. 12) ಶಂಕುಸ್ಥಾಪನೆ ನೆರವೇರಿಸಿ, ಮಾತನಾಡಿದ ಅವರು, ನನ್ನ ಹಳೇ ಕಾರಲ್ಲಿ ಇಡೀ ರಾಜ್ಯ ಸುತ್ತಿ ಸಮಾಜವನ್ನು ಸಂಘಟಿಸಿದೆ. ತಾರಾಕಾನಂದರನ್ನು ಪೀಠಾಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಿದ್ದು ನಾನೇ. ಮುಖ್ಯಮಂತ್ರಿ ಆಗಿದ್ದ ಬಂಗಾರಪ್ಪ ಅವರನ್ನು ಮತ್ತು ಕೇಂದ್ರ ಸಚಿವರಾಗಿದ್ದ ಶರದ್ ಪವಾರ್ ಅವರನ್ನು ಕರೆಸಿ ಪೀಠಕ್ಕೆ ಚಾಲನೆ ನೀಡಲಾಯಿತು ಎಂದರು. ಇದನ್ನೂ ಓದಿ:  ರಾಜಕೀಯ ಹೊರತಾಗಿ ಇತರೇ ಕ್ಷೇತ್ರಗಳಲ್ಲೂ ಮಹಿಳಾ ನಾಯಕತ್ವ ಬಲಗೊಳ್ಳಬೇಕು: ಡಿಸಿಎಂ

ಹೀಗೆ ಕುರುಬರ ಸಂಘ ಮತ್ತು ಕುರುಬ ಸಮಾಜದ ಪೀಠವನ್ನು ಉಳಿಸಿದ್ದು ನಾನು. ರಾಜ್ಯ ಸುತ್ತಿ ಸಮಾಜದ ಸಂಘಟಿಸಿದ್ದು ನಾನು, ಮುಕುಡಪ್ಪ, ಮಾಸ್ತಿ ಮತ್ತು ಇತರರು. ಆಮೇಲೆ ವಿಶ್ವನಾಥ್ ಅವರನ್ನು ಪೀಠದ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ್ದು ನಾನು. ಈಗ ವಿಶ್ವನಾಥ್ ಬಾಯಿಗೆ ಬಂದಂತೆ ಮಾತಾಡುತ್ತಾರೆ. ಆದ್ದರಿಂದ ಇಡೀ ಸಮಾಜ ಈ ಸತ್ಯವನ್ನು ಅರ್ಥ ಮಾಡಿಕೊಳ್ಳಬೇಕು. ನಾನು ಸಮಾಜಕ್ಕೆ ಏನು ಮಾಡಿದ್ದೇನೆ ಎನ್ನುವ ಚರಿತ್ರೆಯನ್ನು ಮನದಟ್ಟು ಮಾಡಿಕೊಳ್ಳಬೇಕು. ಗುರುಪೀಠ ನಾನು ಮಾಡಿದ್ದು ಎಂದು ನಿರಂಜನಾನಂದಪುರಿ ಸ್ವಾಮೀಜಿಗೆ ಹೆದರಿಸುವವರು ಇತಿಹಾಸ ತಿರುಚುತ್ತಿದ್ದಾರೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ರಾಜಕೀಯ ಹೊರತಾಗಿ ಇತರೇ ಕ್ಷೇತ್ರಗಳಲ್ಲೂ ಮಹಿಳಾ ನಾಯಕತ್ವ ಬಲಗೊಳ್ಳಬೇಕು: ಡಿಸಿಎಂ
Next: ನಮ್ಮ ನೀರು, ನಮ್ಮ ಹಕ್ಕು: ಡಿಸಿಎಂ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.