Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಮ್ಮ ನೀರು, ನಮ್ಮ ಹಕ್ಕು: ಡಿಸಿಎಂ
  • Bangalore
  • Politics
  • State
  • Uncategorized

ನಮ್ಮ ನೀರು, ನಮ್ಮ ಹಕ್ಕು: ಡಿಸಿಎಂ

Praja Vahini November 13, 2025 1 minute read
IMG_20251113_163515
Spread the love

ಬೆಂಗಳೂರು: ಮೇಕೆದಾಟಿಗೆ ಸಂಬಂಧಿಸಿದಂತೆ ತಮಿಳುನಾಡು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಆ ಆರ್ಜಿಯನ್ನು ಇದೀಗ ಸುಪ್ರೀಂ ಕೋರ್ಟ್ ವಜಗೊಳಿಸಿರುವುದರಿಂದ ನಮಗೆ ನ್ಯಾಯ ಸಿಕ್ಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇದರಿಂದ ತಮಿಳುನಾಡಿಗೆ ಹಿನ್ನಡೆಯಾಗಿದೆಯಲ್ಲಾ ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕ ನಂತರ ವಿವರವಾಗಿ ಮಾತನಾಡುತ್ತೇನೆ.
ಇದು ಯಾವುದೇ ರೀತಿಯ ಹಿನ್ನಡೆಯಲ್ಲ. ಬದಲಿಗೆ ನ್ಯಾಯ ಪೀಠದಿಂದ ನ್ಯಾಯ ಸಿಕ್ಕಂತಾಗಿದೆ. ಮೇಕೆದಾಟು, ‘ನಮ್ಮ ನೀರು, ನಮ್ಮ ಹಕ್ಕು’ ಯೋಜನೆ. ನಾವು ತಮಿಳುನಾಡಿಗೆ ಯಾವುದೇ ರೀತಿಯಲ್ಲೂ ಅಡ್ಡಿ ಮಾಡುತ್ತಿಲ್ಲ. ಈ ಯೋಜನೆಯಿಂದ ತಮಿಳುನಾಡಿಗೇ ಹೆಚ್ಚು ಲಾಭವಾಗಲಿದೆ. ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ ಎಂದು ತಿಳಿಸಿದರು.

ನ್ಯಾಯಾಲಯಗಳ ತೀರ್ಮಾನದಂತೆ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆಯಲಿದೆ. ಹೀಗಾಗಿ ನಾವು ಈ ಯೋಜನೆ ಮುಂದುವರಿಸಿಕೊಂಡು ಹೋಗುತ್ತೇವೆ. ಈ ಯೋಜನೆಯನ್ನು ನಮ್ಮ ನೆಲದಲ್ಲಿ, ನಮ್ಮ ಹಣದಲ್ಲಿ ಮಾಡಲಾಗುತ್ತಿದೆ. ನೀರಿನ ಕೊರತೆ ಉಂಟಾದಾಗ ತಮಿಳುನಾಡಿಗೆ ನೀರು ಹರಿಸಲು ಈ ಸಮತೋಲಿತ ಅಣೆಕಟ್ಟೆ ನೆರವಾಗಲಿದೆ. ಇದು ಬೆಂಗಳೂರಿಗರ ಗೆಲುವು. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಂದ ಬರುವ ಜನರಿಗೂ ನೀರು ಒದಗಿಸಲಾಗುವುದು. ಈಗಲಾದರೂ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿಗೆ ಮನವಿ ಮಾಡುತ್ತೇನೆ. ನಾವೆಲ್ಲರೂ ಮಾನವೀಯತೆ ದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡೋಣ” ಎಂದು ಕರೆ ನೀಡಿದರು.

ಸಹಕಾರ ನೀಡದೇ ಸಿಡಬ್ಲ್ಯೂಸಿ ಮುಂದೆ ಬೇರೆ ಆಯ್ಕೆಯೇ ಇಲ್ಲ

ನ್ಯಾಯಾಲಯವು ಇಂತಹ ವಿಚಾರದಲ್ಲಿ ಕೇಂದ್ರ ಜಲ ಆಯೋಗಕ್ಕೆ (ಸಿಡಬ್ಲ್ಯೂಸಿ)ಗೆ ಮಾರ್ಗದರ್ಶನ ನೀಡಲಿದ್ದು, ನ್ಯಾಯಾಲಯ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದೆ. ಸಿಡಬ್ಲ್ಯೂಸಿ ಈ ಯೋಜನೆಗೆ ಸಹಕಾರ ನೀಡುವುದೇ ಎಂದು ಮಾಧ್ಯಮದವರು ಕೇಳಿದಾಗ, “ಈ ಯೋಜನೆಗೆ ಅನುಮತಿ ನೀಡದೇ ಬೇರೆ ಆಯ್ಕೆ ಅವರ ಮುಂದೆ ಇಲ್ಲ. ಅವರು ನ್ಯಾಯ ಒದಗಿಸಿಕೊಡಲೇಬೇಕು” ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಹಿಂದೆ ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು: ಸಿಎಂ
Next: ಸರ್ಕಾರಿ ಭೂಮಿಗೆ ಪೋಡಿ ದುರಸ್ತಿಗೆ ಆದೇಶ ತಹಸೀಲ್ದಾರ್ ವಿರುದ್ಧ ಕ್ರಮಕ್ಕೆ ಒತ್ತಾಯ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.