Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ: ಸಿಎಂ
  • Bangalore
  • Politics
  • State

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ: ಸಿಎಂ

Praja Vahini November 14, 2025 1 minute read
Screenshot_2025-11-14-15-35-10-28_99c04817c0de5652397fc8b56c3b3817
Spread the love

ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು ಎಂದು ಅರ್ಥೈಸಿಕೊಂಡಿದ್ದರು. ಆದ್ದರಿಂದ ಚಾಚಾ ನೆಹರೂ ಎಂದೇ ಅವರನ್ನು ಕರೆಯಲಾಗುತ್ತಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.   ಇಂದು ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಜಯಂತಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರೂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೆಹರು ಅವರು ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ದೇಶ ಪ್ರೇಮ ಹಾಗೂ ಸ್ವಾತಂತ್ರ್ಯ ಪ್ರೇಮಗಳನ್ನು ಬೆಳೆಸಿಕೊಂಡಿದ್ದರು. ಬ್ರಿಟಿಷರ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಂಡು ಮಹಾತ್ಮ ಗಾಂಧಿಯವರ ನೆಚ್ಚಿನ ಶಿಷ್ಯರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುತ್ತಾರೆ. ಸುಮಾರು 9 ವರ್ಷಗಳ ಕಾಲ ಕಾರಾಗೃಹದಲ್ಲಿದ್ದು ದೇಶಕ್ಕಾಗಿ ಬಹಳಷ್ಟು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದಾಗ ದೇಶದ ಬಜೆಟ್ ಗಾತ್ರ 197 ಕೋಟಿ ರೂ. ಗಳು ಮಾತ್ರ ಇತ್ತು.

ಎರಡು ಮೂರು ವರ್ಷಗಳ ನಂತರ 4 ಅಂಕಿಗಳ ಹಂತಕ್ಕೆ ತಲುಪಿತು. ಕೃಷಿ, ನೀರಾವರಿ, ಕೈಗಾರಿಕೆಗಳಲ್ಲಿ ಆಸಕ್ತಿ ಹೊಂದಿದ್ದ ನೆಹರೂ ಅವರು ದೇಶವನ್ನು ವೈಜ್ಞಾನಿಕವಾಗಿ, ವೈಚಾರಿಕವಾಗಿ ಬೆಳೆಸುವ ಪ್ರಯತ್ನ ಮಾಡಿದರು. ಪಂಚ ವಾರ್ಷಿಕ ಯೋಜನೆಗಳ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಿದರು. ದೇಶದಲ್ಲಿ ಅನೇಕ ಕೈಗಾರಿಕೆಗಳಾಗಿದ್ದರೆ, ಅಣೆಕಟ್ಟುಗಳಾಗಿದ್ದರೆ, ಕೃಷಿಯಲ್ಲಿ ಸ್ವಾವಲಂಬಿಗಳಾಗಿದ್ದರೆ ಅದಕ್ಕೆ ನೆಹರೂ ಅವರು ಕಾರಣ. ಸುದೀರ್ಘ ಹದಿನೇಳು ವರ್ಷಗಳ ಕಾಲ ಈ ದೇಶದ ಪ್ರಧಾನಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಗೆ ಮಹಾತ್ಮ ಗಾಂಧಿ ಹಾಗೂ ಜವಾಹರಲಾಲ್ ನೆಹರೂ ಅವರನ್ನು ತೆಗಳುವುದೇ ಕೆಲಸ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ಮಹಾತ್ಮ ಗಾಂಧಿ, ನೆಹರೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಅವರನ್ನು ತೆಗಳಿ, ಇಲ್ಲದ ಆರೋಪಗಳನ್ನು ಹೊರಿಸುವುದೇ ಅವರ ಕೆಲಸ. ನರೇಂದ್ರ ಮೋದಿ, ಬಿಜೆಪಿ, ಆರ್.ಎಸ್.ಎಸ್ ಗಾಂಧಿ ಮತ್ತು ನೆಹರೂ ಅವರನ್ನು ಹೀಯಾಳಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಮಲಯಾಳಂ ಬಿಗ್ ಪ್ರಾಜೆಕ್ಟ್ ನಲ್ಲಿ ನಟಿಸುತ್ತಿದ್ದಾರಾ ಮೇಘನಾ ರಾಜ್?
Next: ಬಿ.ಎಸ್.ವಿಶ್ವನಾಥ್ ಅವರು ಸಹಕಾರ ಕ್ಷೇತ್ರದಲ್ಲಿ ಅಪ್ರತಿಮ ಕೊಡುಗೆ ನೀಡಿದವರು: ಸಿಎಂ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.