Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಟಿಗೆ ಲೈಂಗಿಕ ಕಿರುಕುಳ ನಿರ್ಮಾಪಕ ಅರೆಸ್ಟ್
  • Cinema
  • Crime
  • State

ನಟಿಗೆ ಲೈಂಗಿಕ ಕಿರುಕುಳ ನಿರ್ಮಾಪಕ ಅರೆಸ್ಟ್

Praja Vahini November 15, 2025 1 minute read
WhatsApp Image 2025-11-15 at 12.11.13
Spread the love

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಿನಿಮಾ ರಂಗದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣ ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಅದರಂತೆ ಮತ್ತೆ ಇದೀಗ ಕನ್ನಡ ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ ನಟಿಗೆ ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ದೂರು ದಾಖಲಿಸಿದ್ದು ದೂರಿನ ಆಧಾರದ ಮೇಲೆ ಅರವಿಂದ್ ವೆಂಕಟೇಶ ರೆಡ್ಡಿ ಬಂಧನಕ್ಕೆ ಒಳಪಡಿಸಲಾಗಿದೆ.

ಹೌದು, ಇತ್ತೀಚಿನ ದಿನಗಳಲ್ಲಿ ನಟಿಯರಿಗೆ ಸಿನಿಮಾಗಳಲ್ಲಿ ನಟಿಸುವ ಅವಕಾಶ ಕೊಡಿಸುವುದಾಗಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣ ಹೆಚ್ಚಾಗಿ ಕಂಡುಬರುತ್ತದೆ ಅದಕ್ಕೆ ಮತ್ತೊಂದು ಉದಾಹರಣೆ ಬೆಳಕಿಗೆ ಬಂದಿದೆ.

ಯೆಸ್…ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿನ ಬಂಧಿಸಲಾಗಿದೆ. ಎಸಿಪಿ ಚಂದನ್ ಮತ್ತು ತಂಡದಿಂದ ಆರೋಪಿ ಅರೆಸ್ಟ್ ಮಾಡಲಾಗಿದೆ. ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿ ಲಾಕ್ ಆಗಿದ್ದಾನೆ. ಕಳೆದ ತಿಂಗಳು 17ರಂದು ಅರವಿಂದ್ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು.

ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. 2021ರಲ್ಲಿ ಅರವಿಂದ್​ಗೂ ಈ ನಟಿಗೂ ಪರಿಚಯ ಬೆಳೆದಿತ್ತು. 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್​ ಕ್ರಿಕೆಟ್ ಕಪ್’ ಉದ್ಘಾಟನೆಗೆ ಬರುವಂತೆ ಅರವಿಂದ್ ನಟಿ ಬಳಿ ಕೇಳಿದ್ದ. ಅಂತೆಯೇ ನಟಿ ತೆರಳಿದ್ದರು. ಅಲ್ಲಿಂದ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಅಲ್ಲಿಂದ ಪ್ರೀತಿ-ಕಾಳಜಿಯಿಂದ ಅರವಿಂದ್ ನಡೆದುಕೊಳ್ಳುತ್ತಿದ್ದನಂತೆ. ಆ ಬಳಿಕ 2022ರ ಆಗಸ್ಟ್​ನಲ್ಲಿ ಅರವಿಂದ್ ನಟಿಯ ಜೊತೆ ಸಂಪರ್ಕ ಕಳೆದುಕೊಂಡ. ಇದಕ್ಕೆ ಕಾರಣ ನಟಿಗೆ ತಿಳಿದಿರಲಿಲ್ಲ.

ನಂತರ ಅರವಿಂದ್ ಮತ್ತೆ ನಟಿಯ ಜೊತೆ ಸಂಪರ್ಕ ಬೆಳೆಸಿದ್ದೂ ಅಲ್ಲದೆ, ನಟಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಆತನ ಮಾನಸಿಕ ಸ್ಥಿತಿ ಹಾಗೂ ಕುಡಿತದ ಚಟದ ಬಗ್ಗೆ ನಟಿಗೆ ಆಗ ಗೊತ್ತಾಯಿತು. 2024ರಲ್ಲಿ ಒಮ್ಮೆ ಅರವಿಂದ್ ನಟಿಗೆ ಕರೆ ಮಾಡಿದ್ದೂ ಅಲ್ಲದೆ, ನಿನ್ನನ್ನು ಮದುವೆ ಆಗುತ್ತೇನೆ ಎಂದು ಹೇಳಿದ್ದ. ಇದರಿಂದ ಭಯಗೊಂಡ ನಟಿ ನೂರು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರಂತೆ. ಈ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ನದಿಯಂತೆ ಬಂಗಾಳದಲ್ಲಿ ನಮ್ಮ ಗೆಲುವಿಗೆ ದಾರಿ: ಮೋದಿ

ನಂತರ ಅರವಿಂದ್ ಮನೆಗೆ ಬಂದು ನಟಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದ. ಈ ವಿಚಾರವನ್ನು ನಟಿಯ ಮನೆಯವರಿಗೆ ಹೇಳಲು ಅವಕಾಶವನ್ನೇ ನೀಡಿರಲಿಲ್ಲವಂತೆ. ಕರೆ ಮಾಡುತ್ತೇನೆ ಮೊಬೈಲ್ ಕೊಡು ಎಂದು ನಟಿ ಹೇಳಿದಾಗ, ಅರವಿಂದ್ ಏಕಾಏಕಿ ನಟಿಯ ಮೇಲೆ ಮೇಲೆ ಹಲ್ಲೆ ಮಾಡಿದ್ದೂ ಅಲ್ಲದೆ, ಬಟ್ಟೆ ಹರಿದು ಅರೆಬೆತ್ತಲೆ ಮಾಡಿದ್ದ.

ನಂತರ ನಟಿ ಬೇರೆ ದಾರಿ ಕಾಣದೆ ತಾಯಿ ಬಳಿ ವಿಚಾರ ಹೇಳಿಕೊಂಡಿದ್ದರು. ಆಗ ಅರವಿಂದ್, ‘ನಟಿ ನನ್ನಿಂದ ಸಾಕಷ್ಟು ಖರ್ಚು ಮಾಡಿಸಿದ್ದಾಳೆ. ಕೋಟಿ ರೂಪಾಯಿ ಕೊಡಬೇಕು’ ಎಂದು ಬೆದರಿಕೆ ಹಾಕಿದ್ದ.  ನಂತರ ನಟಿ ಹಾಗೂ ಅವರ ಗೆಳೆಯರ ಬಗ್ಗೆ ಇಲ್ಲಸಲ್ಲದ ಆರೋಪವನ್ನು ಅರವಿಂದ್ ಮಾಡಿದ್ದರಂತೆ. ಈ ಎಲ್ಲಾ ಕಾರಣಕ್ಕೆ ಅವರನ್ನು ಬಂಧಿಸುವಂತೆ ನಟಿ ಕೋರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ನದಿಯಂತೆ ಬಂಗಾಳದಲ್ಲಿ ನಮ್ಮ ಗೆಲುವಿಗೆ ದಾರಿ: ಮೋದಿ
Next: ಸಿಲಿಕಾನ್ ಸಿಟಿಗೆ ಸುರಂಗ ರಸ್ತೆ ಬೇಡ, ಮೆಟ್ರೋ ಯೋಜನೆ ವಿಸ್ತರಿಸಿ: ಆರ್.ಅಶೋಕ್

Views:

76

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.