Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಸಿಎಂ
  • Bangalore
  • Front news
  • Politics
  • State

ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಸಿಎಂ

Praja Vahini November 16, 2025 1 minute read
WhatsApp Image 2025-11-01 at 14.03.48
Spread the love

ಬೆಂಗಳೂರು: “ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೀರಿ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ, “ನನ್ನ ಮಾನಸಿಕ, ದೈಹಿಕ ಹಾಗೂ ರಾಜಕೀಯ ಆರೋಗ್ಯ ಸರಿಯಾಗಿದೆ. ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ. ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ. ಸದ್ಯದಲ್ಲೇ ಸಂಸತ್ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ ಮಾಡಬೇಕು. ಇದೆಲ್ಲವನ್ನು ಯಾರು ಮಾಡಬೇಕು? ನಾನೇ ಮಾಡಬೇಕು. ನಾನೇಕೆ ರಾಜಿನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ” ಎಂದು ತಿಳಿಸಿದರು.

ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗುತ್ತಿದೆ, ಖರ್ಗೆ ಅವರ ಭೇಟಿ ವೇಳೆ ಈ ಬಗ್ಗೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, “ಅದೆಲ್ಲಾ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಹೈಕಮಾಂಡ್ ಬಳಿ ಚರ್ಚೆ ಮಾಡುತ್ತಾರೆ. ನನ್ನನ್ನು ಕರೆದರೆ ನಾನು ಹೋಗುತ್ತೇನೆ. ನಾನು ಕೇವಲ ಪಕ್ಷದ ಕಚೇರಿಗಳ ಶಂಕುಸ್ಥಾಪನೆಗೆ ದಿನಾಂಕ ನಿಗದಿ ಮಾಡಲು ಹೋಗುತ್ತಿರುವೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟಾಗಿ ಶಂಕುಸ್ಥಾಪನೆ ಮಾಡಬೇಕು ಎಂಬುದು ನನ್ನ ಆಸೆ. ಡಿ. 1 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ, ಯಾವುದಾದರೂ ವಾರಾಂತ್ಯದಲ್ಲಿ ಬಂದು ಹೋಗಿ ಎಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಬೆಂಗಳೂರಿಗೆ ಅಭಿವೃದ್ಧಿ ಬೇಕು ಆದರೆ ಅವೈಜ್ಞಾನಿಕವಾಗಲ್ಲ: ಶೋಭಾ ಕರಂದ್ಲಾಜೆ
Next: ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿಕೆಸು

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.