ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿದೇಶಗಳಿಂದ ಮಾದಕ ವಸ್ತುಗಳು ಹೆಚ್ಚಾಗಿ ಸಾಗಾಟನೆಯಾಗುತ್ತಿದ್ದು, ಕಳೆದ 18 ದಿನಗಳಲ್ಲಿ ಬೆಂಗಳೂರು ಏರ್ಪೋರ್ಟ್ ನಲ್ಲಿ ಸುಮಾರು 14.22 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಹೌದು, ಬೆಂಗಳೂರು ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಕಳೆದ 18 ದಿನಗಳಲ್ಲಿ ನಡೆಸಿದ ಕಾರ್ಯಾಚರಣೆಗಳಲ್ಲಿ ಸುಮಾರು ₹14.22 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಮತ್ತು ಇ-ಸಿಗರೇಟ್ಗಳನ್ನು ವಶಕ್ಕೆ ಪಡೆದಿದ್ದಾರೆ. ವಿದೇಶಗಳಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ತರಲು ಪ್ರಯತ್ನಿಸಿದ 10 ಪ್ರಯಾಣಿಕರನ್ನು ವಶಕ್ಕೆ ಪಡೆಯಲಾಗಿದೆ.
ಬ್ಯಾಂಕಾಕ್ ಸೇರಿದಂತೆ ವಿವಿಧ ವಿದೇಶಿ ನಗರಗಳಿಂದ ಬಂದ ಪ್ರಯಾಣಿಕರು ತಮ್ಮ ಬ್ಯಾಗ್‌ಗಳಲ್ಲಿ 38.64 ಕೆ.ಜಿ ಹೈಡ್ರೋಪೋನಿಕ್ಸ್ ಗಾಂಜಾ, ₹2.38 ಲಕ್ಷ ಮೌಲ್ಯದ ವಿದೇಶಿ ಇ-ಸಿಗರೇಟ್ಗಳು ಮತ್ತು 8 ಬಗೆಯ ಅಪರೂಪದ ಜೀವಂತ ಪ್ರಾಣಿಗಳನ್ನು ಸಾಗಿಸುತ್ತಿದ್ದರು ತಿಳಿದುಬಂದಿದೆ. ಇದನ್ನೂ ಓದಿ: ಮೇಕೆದಾಟು ಯೋಜನೆ ಬಹಳ ವರ್ಷದ ರಾಜ್ಯದ ಜನರ ಕನಸಾಗಿದೆ: ಬೊಮ್ಮಾಯಿ
ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರ ಚೆಕಿಂಗ್ ವೇಳೆ ಸಂಶಯಾಸ್ಪದ ಬ್ಯಾಗ್‌ಗಳನ್ನು ಸ್ಕ್ಯಾನಿಂಗ್ ಮಾಡಿದಾಗ ಈ ಅಕ್ರಮ ವಸ್ತುಗಳು ಪತ್ತೆಯಾಗಿವೆ. ಅಧಿಕಾರಿಗಳು ಕಸ್ಟಮ್ಸ್ ಆಕ್ಟ್ ಹಾಗೂ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
