ಬೆಂಗಳೂರು: ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಇಂದು ಬುಧವಾರ ನ. 19ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ, ಇಂದಿರಾ ಗಾಂಧಿ ಅವರ ಆಯ್ದ ನುಡಿಮುತ್ತುಗಳ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಬರೆದಿರುವ ಪುಸ್ತಕವನ್ನು ಡಿ ಕೆ ಶಿವಕುಮಾರ್ ಅವರು ಕನ್ನಡಕ್ಕೆ ತರ್ಜುಮೆ ಮಾಡಿರುವ ಕೃತಿಯನ್ನು ಸಿಎಂ ಬಿಡುಗಡೆ ಮಾಡಿದರು. ಇದನ್ನೂ ಓದಿ: ಎಲ್ ಜಿ ಹಾವನೂರು ಅವರ ಪ್ರತಿಮೆ ಅನಾವರಣ
ಈ ಸಂದರ್ಭದಲ್ಲಿ ಹಿರಿಯ ನಾಯಕಿ ಬಿ ಟಿ ಲಲಿತಾ ನಾಯಕ್, ವಾಸಂತಿ ಶಿವಣ್ಣ, ಮುಮ್ತಾಜ್ ಬೇಗಂ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ ಮತ್ತಿತರರು ಭಾಗವಹಿಸಿದ್ದರು.
