Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಧಿಕಾರದ ದಾಖಲೆ ಬರೆಯುವ ಕನಸು ಶಿವಕುಮಾರ್ ಅವರಿಗಿಲ್ಲ: ಡಿ.ಕೆ. ಸುರೇಶ್
  • Bangalore
  • Politics
  • State

ಅಧಿಕಾರದ ದಾಖಲೆ ಬರೆಯುವ ಕನಸು ಶಿವಕುಮಾರ್ ಅವರಿಗಿಲ್ಲ: ಡಿ.ಕೆ. ಸುರೇಶ್

Praja Vahini November 20, 2025 1 minute read
WhatsApp Image 2025-11-20 at 18.26.39
Spread the love

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರಿಗೆ 8 ವರ್ಷಕ್ಕಿಂತ ಹೆಚ್ಚು ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿ ದಾಖಲೆ ಬರೆಯುವ ಇಚ್ಛೆ ಇಲ್ಲ. ಅಧಿಕಾರದ ದಾಖಲೆ ಮಾಡುವ ಕನಸು ಅವರದ್ದಲ್ಲ. ರಾಜಕಾರಣದಲ್ಲಿ ಶಾಶ್ವತವಾಗಿ ಉಳಿಯಬೇಕಾದರೆ, ಜನರಿಗೆ ಆಗಲಿ, ಬೇರೆಯವರಿಗೆ ಆಗಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಆಗ ಶಾಶ್ವತವಾಗಿ ನಾಯಕರಾಗಿ ಉಳಿಯಲು ಸಾಧ್ಯ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ದೇವರಾಜ ಅರಸು, ನಿಜಲಿಂಗಪ್ಪ, ಎಸ್.ಎಂ. ಕೃಷ್ಣ ಸೇರಿದಂತೆ ಎಲ್ಲರೂ ಹೈಕಮಾಂಡ್ ಅಣತಿಯಂತೆ ಕೆಲಸ ಮಾಡಿದ್ದಾರೆ ಎಂದು ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ಹೇಳಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ಸಿಎಂ ಅವರ ಬಳಿ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿಲ್ಲ. ಅಷ್ಟು ದೊಡ್ಡವನೂ ನಾನಲ್ಲ. ಅವರು ಹಿರಿಯ ನಾಯಕರು. ಅವರಿಗೆ ತಮ್ಮದೇ ಆದ ಜವಾಬ್ದಾರಿ ಇದೆ. ಕರ್ನಾಟಕದ ಜನರಿಗೆ ಕೊಟ್ಟ ಎಲ್ಲಾ ಭರವಸೆ ಈಡೇರಿಸಿದ್ದಾರೆ. ಈ ಸರ್ಕಾರದಲ್ಲೂ ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದಾರೋ ಅದರಂತೆ ನಡೆಯುತ್ತಿದ್ದಾರೆ” ಎಂದು ಹೇಳಿದರು.

ಕರ್ನಾಟಕದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇಂದಿಗೆ ಎರಡೂವರೆ ವರ್ಷ ತುಂಬಿದೆ. ಕೊಟ್ಟ ಮಾತಿನಂತೆ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಪವರ್ ಶೇರಿಂಗ್ ವಿಚಾರ ನನಗೆ ಗೊತ್ತಿಲ್ಲ. ಅವರು ಈಗ ಮುಖ್ಯಮಂತ್ರಿ ಆಗಿದ್ದಾರೆ. ಈ ವಿಚಾರವನ್ನು ಪಕ್ಷದ ವರಿಷ್ಠರು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತಾರೆ. ಈ ವಿಚಾರದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನೀವು ಮಾಧ್ಯಮಗಳಲ್ಲಿ ತೋರಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ ಎಂದರು. ಇದನ್ನೂ ಓದಿ: ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಸಿಎಂ

ಎಲ್ಲರಿಗೂ ಆ ಆಸೆ ಇದೆ. ಅವರ ಅಭಿಮಾನಿಗಳು ಹೇಳುತ್ತಿರುತ್ತಾರೆ, ಪೂಜೆ ಮಾಡುತ್ತಿರುತ್ತಾರೆ, ಅವರಿಗೆ ಏನು ಬೇಕೋ ಮಾಡುತ್ತಿರುತ್ತಾರೆ. ನಾವುಗಳು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುವವರು. ಪಕ್ಷ ಏನು ಹೇಳುತ್ತದೆಯೋ ಅದನ್ನು ಸಿಎಂ, ಡಿಸಿಎಂ ಸೇರಿದಂತೆ ಎಲ್ಲಾ ನಾಯಕರು ಪಾಲನೆ ಮಾಡುತ್ತಾರೆ. ಇದು ನಮ್ಮ, ನಿಮ್ಮ ಮುಂದೆ ನಡೆಯುವ ಚರ್ಚೆಯಲ್ಲ. ಇದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಏನೇ ತೀರ್ಮಾನ ಮಾಡುವುದಿದ್ದರೂ ಹೈಕಮಾಂಡ್ ತೀರ್ಮಾನ ಮಾಡಬೇಕು. ಇಲ್ಲಿ ವೈಯಕ್ತಿಕ ವಿಚಾರ ಇಲ್ಲ.  ಎಂದು ತಿಳಿಸಿದರು.

ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿ ಆರು ವರ್ಷ ಕೆಲಸ ಮಾಡುತ್ತಿದ್ದು, ನಾಳೆ ಬೇರೆಯವರು ಅಧ್ಯಕ್ಷರಾದರೆ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ಯಾರೇ ಅಧ್ಯಕ್ಷರಾದರೂ ಅವರಿಗೆ ಅವಕಾಶ ಮಾಡಿಕೊಡಲು ಶಿವಕುಮಾರ್ ಅವರು ಸಿದ್ಧರಿದ್ದಾರೆ ಎಂದು ತಿಳಿಸಿದರು.

ಅವರು ರಾಜೀನಾಮೆ ನೀಡುವುದಿಲ್ಲ ಎಂದು ನಿಮ್ಮ ಬಳಿ ಹೇಳಿಲ್ಲವಲ್ಲ. ನೀವು ಆ ರೀತಿ ಹೇಳುತ್ತಿದ್ದೀರಾ. ಅವಕಾಶ ಸಿಕ್ಕಾಗ ಏನೆಲ್ಲಾ ಮಾಡಬೇಕೋ ಅದನ್ನು ಶಿವಕುಮಾರ್ ಅವರು ಮಾಡಿದ್ದಾರೆ ಎಂದರು.

ಒಬ್ಬೊಬ್ಬರೂ ಒಂದೊಂದು ರೀತಿ ವ್ಯಾಖ್ಯಾನ ಮಾಡಿ ಕಾರ್ಯಕರ್ತರನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿರುತ್ತಾರೆ. ಹೀಗಾಗಿ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬುವುದು ಪಕ್ಷ ಹಾಗೂ ಅಧ್ಯಕ್ಷರ ಜವಾಬ್ದಾರಿ. ಹೀಗಾಗಿ ಈ ಮಾತುಗಳನ್ನು ಆಡಿರುತ್ತಾರೆ ಎಂದು ತಿಳಿಸಿದರು.

ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿರುವುದೇ ದೊಡ್ಡ ಸಾಧನೆ. ಪಕ್ಷ ಅಧೋಗತಿಯಲ್ಲಿದ್ದ ಸಂದರ್ಭದಲ್ಲಿ ಜವಾಬ್ದಾರಿ ತೆಗೆದುಕೊಂಡು ಪಕ್ಷಕ್ಕೆ ಚೈತನ್ಯ ತುಂಬಿದ್ದಾರೆ. ಕಾರ್ಯಕರ್ತರಿಗೆ ಹುಮ್ಮಸ್ಸು ಕೊಟ್ಟಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತಂದು, ಕೊಟ್ಟ ಮಾತಿನಂತೆ ನಡೆದು ಉತ್ತಮ ಆಡಳಿತ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

 

 

About the Author

Praja Vahini

Editor

View All Posts

Spread the love

Post navigation

Previous: ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ
Next: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಲಕ್ಷ್ಮೀ ಹೆಬ್ಬಾಳಕರ್

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.