ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿರುವುದರಿಂದ ಪಕ್ಷದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಮಾಡಲು ಜೆಡಿಎಸ್ ಪಕ್ಷವು ಭರ್ಜರಿ ತಯಾರಿ ನಡೆಸಿಕೊಳ್ಳುತ್ತಿದ್ದು, ಬೆಳ್ಳಿ ಹಬ್ಬ ಸಂಭ್ರಮಾಚರಣೆ, ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ ಕುಮಾರಸ್ವಾಮಿ ಅವರು, ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನಕ್ಕೆ ಭೇಟಿ ನೀಡಿ ಕಾರ್ಯಕ್ರಮಗಳ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದರು. ಇದನ್ನೂ ಓದಿ: ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಅವಕಾಶ : ಲಕ್ಷ್ಮೀ ಹೆಬ್ಬಾಳಕರ್
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ತಿಪ್ಪೇಸ್ವಾಮಿ ಅವರು, ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡ ಅವರು, ಜೆಡಿಎಸ್ ರಾಜ್ಯ ಸಾಮಾಜಿಕ ಜಾಲತಾಣಗಳ ಅಧ್ಯಕ್ಷರಾದ ಚಂದನ್ ಹೆಚ್.ಎಸ್ ಅವರು ಉಪಸ್ಥಿತರಿದ್ದರು.
