ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಶುಕ್ರವಾರ ನ. 21) ದಿಡೀರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.
ಜೈಲಿನಲ್ಲಿರುವ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇಬ್ಬರು ಕಾಂಗ್ರೆಸ್ ಶಾಸಕರು ಜೈಲಿನಲ್ಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಇದನ್ನೂ ಓದಿ: ಅಹಿಂದ ಪಕ್ಷವಲ್ಲಾ, ಸಂಘಟನ ಶಕ್ತಿ-ಡಾ.ಮೇಟಿ
ಇನ್ನು ಜೈಲಿಗೆ ಭೇಟಿ ನೀಡಿರುವ ಡಿಕೆ ಶಿವಕುಮಾರ್ ಅವರು, ಜೈಲಿನ ಒಳಗಡೆ ಪರಿಶೀಲನೆ ನಡೆಸಿದ್ದಾರೆ. ಕೈದಿಗಳಿಗೆ ರಾಜಾತಿಥ್ಯದ ಬಗ್ಗೆ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಮೊಬೈಲ್ ಹೇಗೆ ಬಂತು, ರಾಜಾತಿಥ್ಯದ ನೀಡುವವರು ಯಾರೆಂದು ಗರಂ ಆಗಿದ್ದಾರೆ. ಕೈದಿಗಳಿಗೆ ಮೊಬೈಲ್ ನೆಟ್ವರ್ಕ್ ಹೇಗೆ ಸಿಕ್ತಾ ಇದೆ? ಜೈಲಿನಲ್ಲಿ ಅಕ್ರಮಗಳ ಬಗ್ಗೆ ಮಾಧ್ಯಮಗಳಲ್ಲಿ ಎಷ್ಟೆಲ್ಲಾ ವರದಿಯಾಗುತ್ತಿದ್ದರು ಸಜಾ ಬಂಧಿಗಳ ಬ್ಯಾರಕ್, ಕ್ಯಾಂಟಿನ್, ಆಸ್ಪತ್ರೆ ವಿಸೀಟ್ ಬಗ್ಗೆ ಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ.
ಇಂತ ಘಟನೆ ಮರುಕಳಿಸಿದರೆ ಮುಲಾಜಿಲ್ಲದೆ ಎಲ್ಲರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
