ಶಿಡ್ಲಘಟ್ಟ: ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.
ಶಿಡ್ಲಘಟ್ಟದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ಶಾಸಕರ ಬಿಜೆಪಿ ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಲಾಗಿದೆ ಎಂದು ಅವರದೇ ಪಕ್ಷದ ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ. ಅವರು ಎಷ್ಟು ಹಣ ಆಮೀಷ ಒಡ್ಡಿದ್ದರು ಎಂದು ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ದಾಖಲೆಗಳಲ್ಲಿ ಸೇರಿವೆ. ಈಗ ಬಿಜೆಪಿಯವರು ತಮ್ಮ ಪ್ರವೃತ್ತಿಯನ್ನು ನೆನೆಸಿಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ವಿರೋಧ ಪಕ್ಷಗಳದು ಹಗಲುಗನಸು; 2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ: ಡಿಕೆಶಿ
ಹೈಕಮಾಂಡ್ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ ಎಂದು ತಿಳಿಸಿದರು.
