ಬೆಂಗಳೂರು: ಇಂದು ಬೆಳ್ಳಂಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ವಿರುದ್ಧ ಚಾಟಿ ಬೀಸಿದ್ದು, ಕರ್ನಾಟಕದ ಸುಮಾರು 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೌದು, ಆದಾಯಕ್ಕೂ ಮೀರಿ ಆಸ್ತಿ ಗಳಿಸಿರುವ ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಲು ಇಂದು (ಮಂಗಳವಾರ ನ. 25) ಲೋಕಾಯುಕ್ತ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಡೀ ದೇಶಕ್ಕೆ ಮಾದರಿ: ಲಕ್ಷ್ಮೀ ಹೆಬ್ಬಾಳಕರ್
ಇನ್ನು ದಾಳಿಗೆ ಒಳಗಾದ ಪ್ರಮುಖ ಅಧಿಕಾರಿಗಳಲ್ಲಿ ಬೆಂಗಳೂರು RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ (ಎಲೆಕ್ಟ್ರಾನಿಕ್ ಸಿಟಿ), ಮಂಡ್ಯ ನಗರ ಪಾಲಿಕೆ CAO ಪುಟ್ಟಸ್ವಾಮಿ, ಬೀದರ್ ಕೃಷ್ಣಾ ಮೇಲ್ದಂಡೆ ಯೋಜನೆ ಮು.ಇಂಜಿನಿಯರ್ ಪ್ರೇಮ್ ಸಿಂಗ್, ಮೈಸೂರು ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್ಪೆಕ್ಟರ್ ರಾಮಸ್ವಾಮಿ ಸಿ., ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸುಭಾಶ್ ಚಂದ್ರ ಮತ್ತು ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್, ಶಿವಮೊಗ್ಗ SIMS ಮೆಡಿಕಲ್ ಕಾಲೇಜ್ FDA ಲಕ್ಷ್ಮೀಪತಿ ಸಿ.ಎನ್, ದಾವಣಗೆರೆ APMC ಸಹಾಯಕ ನಿರ್ದೇಶಕ ಪ್ರಭು ಜೆ., ಮಡಿಕೇರಿ PWD ಸಹಾಯಕ ಇಂಜಿನಿಯರ್ ಗಿರೀಶ್ ಡಿ.ಎಂ ಮತ್ತು ಹಾವೇರಿ ಶೇಕಪ್ಪ, ಇಇ, ಯೋಜನಾ ನಿರ್ದೇಶಕ ಕಚೇರಿ ಹಾವೇರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ, ಕಚೇರಿಗಳ ದಾಳಿ ಮಾಡಿ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
