Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ: ಸಿಎಂ
  • Bangalore
  • Politics
  • State

ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ: ಸಿಎಂ

Praja Vahini November 25, 2025 1 minute read
WhatsApp Image 2025-11-25 at 15.01.09
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಮಂಗಳವಾರ ನ. 25) ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಧುಗಿರಿ ಮತ್ತು ಇಂಡಿ ನಬಾರ್ಡ್‌ ಸಹಯೋಗದೊಂದಿಗೆ ಹಾಗೂ ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರಿನಲ್ಲಿ ಕೆ.ಕೆ.ಆರ್.ಡಿ.ಬಿ ಮ್ಯಾಕ್ರೋ ಅನುದಾನದಡಿ ನೂತನ ಜಿಟಿಟಿಸಿ ಗಳನ್ನು ಸ್ಥಾಪಿಸುವ ಸಂಬಂಧ ಸಭೆ ನಡೆಸಿ, ಸಮಾಲೋಚನೆ ನಡೆಸಿದರು.

ಸಭೆ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಒಟ್ಟು 32ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್ನಲ್ಲಿ ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಇಂಡಿ, ಮಧುಗಿರಿ, ಕಂಪ್ಲಿ, ರಾಯಚೂರು ಗ್ರಾಮೀಣ, ಸಿಂಧನೂರಿನಲ್ಲಿ ಜಿಟಿಟಿಸಿ ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಸಂಡೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಲು ಸೂಚನೆ ನೀಡಿದರು.

ಜಿಟಿಟಿಸಿ ಪ್ರವೇಶಾತಿಯನ್ನು 6 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇಲ್ಲಿಂದ ತರಬೇತಿ ಪಡೆದು ಹೊರಬರುವ ವಿದ್ಯಾರ್ಥಿಗಳಿಗೆ ವಿದೇಶಿ ಕಂಪನಿಗಳಲ್ಲಿಯೂ ಸೇರಿದಂತೆ ಶೇಕಡ 100 ರಷ್ಟು ನೇಮಕಾತಿ ಆಗುತ್ತಿದೆ. ಇದನ್ನೂ ಓದಿ: ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ 3 ದೇಶಗಳಿಗೆ ನಂದಿನಿ ತುಪ್ಪ ರಫ್ತು: ಸಿಎಂ

ಯಾವ ಕೋರ್ಸ್ಗಳಿಗೆ ಬೇಡಿಕೆ ಇದೆ ಅಂತಹ ಕೋರ್ಸ್ಗಳನ್ನು ಪ್ರಾರಂಭಿಸಲು ಸೂಚನೆ. ಕೈಗಾರಿಕೆಗಳ ಬೇಡಿಕೆಗಳಿಗೆ ಅನುಗುಣವಾಗಿ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಕಾರ್ಮಿಕ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

ಜಿಟಿಟಿಸಿ ಉತ್ಪಾದನಾ ಕೇಂದ್ರದಲ್ಲಿ ಇಸ್ರೋದ ಚಂದ್ರಯಾನ ನೌಕೆ ಲೂನಾರ್ ರೋವರ್ ಚಕ್ರದ ಉತ್ಪಾದನೆ ಸೇರಿದಂತೆ ಹಲವು ವೈಮಾನಿಕ ಉಪಕರಣಗಳ ಉತ್ಪಾದನೆ ಮಾಡಲಾಗುತ್ತಿದೆ. ಜಪಾನ್, ಜರ್ಮನಿ, ಆಸ್ಟ್ರೇಲಿಯಾ ಸೇರಿದಂತೆ ಹಲವು ರಾಷ್ಟ್ರಗಳೊಂದಿಗೆ ಜಿಟಿಟಿಸಿ ಒಡಂಬಡಿಕೆ ಮಾಡಿಕೊಳ್ಳಲಿದೆ.

ಈ ಸಂದರ್ಭದಲ್ಲಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂಪರ್ವೇಜ್ ಸೇರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.‌

 

About the Author

Praja Vahini

Editor

View All Posts

Spread the love

Post navigation

Previous: ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ 3 ದೇಶಗಳಿಗೆ ನಂದಿನಿ ತುಪ್ಪ ರಫ್ತು: ಸಿಎಂ
Next: ಅನಿಷ್ಟ ರೈತವಿರೋಧಿ ಕಾಂಗ್ರೆಸ್ ಸರಕಾರ: ವಿಜಯೇಂದ್ರ

Views:

63

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.