ಪಣಜಿ: ಪ್ರಧಾನಿ ಮೋದಿ ಅವರು ಇಂದು (ಶುಕ್ರವಾರ ನವಂಬರ್ 28) ಗೋವಾದ ಕಾಣಕೋಣದಲ್ಲಿರುವ ಜಗತ್ತಿನ ಅತೀ ಎತ್ತರದ ಶ್ರೀರಾಮನ ಮೂರ್ತಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ದಕ್ಷಿಣ ಅಯೋಧ್ಯೆಯಾಗಿ ರೂಪುಗೊಳ್ಳುತ್ತಿರುವ ಪರ್ತಗಾಳಿ ಜೀವೋತ್ತಮ ಮಠದ ಬಿಲ್ಲಿನಾಕಾರದ ಆದರ್ಶ ಧಾಮ್ದಲ್ಲಿರುವ 77ಅಡಿ ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ಮೋದಿ ಅವರು ಅನಾವರಣಗೊಳಿಸಲಿದ್ದಾರೆ.
ಇನ್ನೂ ಈ ಮೂರ್ತಿಯನ್ನು ಗುಜರಾತ್ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಬೆಂಗಳೂರಿನಲ್ಲಿ ಕೆಂಪೇಗೌಡರ ಮೂರ್ತಿಗಳನ್ನು ವಿನ್ಯಾಸಗೊಳಿಸಿದ ಪ್ರಖ್ಯಾತ ಶಿಲ್ಪಿ `ಪದ್ಮಭೂಷಣ’ ಪುರಸ್ಕೃತ ರಾಮ ಸುತಾರ್ ಅವರೇ ಈ ಶ್ರೀರಾಮನ ಮೂರ್ತಿಯನ್ನು ನಿರ್ಮಿಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ನರೇಂದ್ರ ಮೋದಿ ಅಬ್ಬರ
ಶ್ರೀಮಠಕ್ಕೆ 550 ಸಂವತ್ಸರಗಳು ತುಂಬಿದ ಹಿನ್ನೆಲೆ ಆಯೋಜನೆಗೊಂಡಿರುವ `ಸಾರ್ಧ ಪಂಚ ಶತಮಾನೋತ್ಸವ’ ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ ಹಾಗೂ ನಾಣ್ಯವನ್ನು ಬಿಡುಗಡೆಗೊಳಿಸಲಿದ್ದಾರೆ. ಇದೇ ವೇಳೆ ಶ್ರೀರಾಮನ ಮೂರ್ತಿ ಸುತ್ತಲೂ ರಾಮಾಯಣ ಥೀಮ್ ಪಾರ್ಕ್, ಶ್ರೀರಾಮನ ಮಹಿಮೆ ಸಾರುವ ಮ್ಯೂಸಿಯಂ ಹಾಗೂ 7ಡಿ ರಂಗಮಂದಿರಕ್ಕೂ ಚಾಲನೆ ನೀಡಲಿದ್ದಾರೆ.
