ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕುರ್ಚಿ ಕದನ ಜೋರಾಗಿಯೇ ನಡೆಯುತ್ತಿದ್ದು, ಇಂದು (ಶನಿವಾರ ನ.29) ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಎಲ್ಲರ ಚಿತ್ತ ಕಾಂಗ್ರೆಸ್ ಹೈಕಮಾಂಡ್ ಅತ್ತ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ನಾಯಕತ್ವ ಬದಲಾವಣೆ ಗುದ್ದಾಟದಲ್ಲಿಯೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಕುತೂಹಲ ಮೂಡಿಸಿದ್ದಾರೆ.
ಹೌದು, ಸಿಎಂ ಹಾಗೂ ಡಿ ಸಿಎಂ ಅಧಿಕೃತ ಕಾವೇರಿ ನಿವಾಸದಲ್ಲಿ ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದು, ಹೈಕಮಾಂಡ್ ಸೂಚಿಸಿದ್ದಂತೆ ಕುರ್ಚಿ ಕಸರತ್ತಿಗೆ ಸಿಎಂ ಡಿಸಿಎಂ ಇಬ್ಬರೇ ಚರ್ಚೆ ಮಾಡಿ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕುತೂಹಲ ಮೂಡಿದೆ.
ಹೈಕಮಾಂಡ್ ಸೂಚಿಸಿದಂತೆ ಕಾವೇರಿ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಸ್ಪರ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ ಮಾತುಕತೆ ನಡೆಸಿದ್ದಾರೆ.
ಇನ್ನು ಈ ಮೀಟಿಂಗ್ ನಲ್ಲಿ ಸಿಎಂ ಡಿಸಿಎಂ ಹೊರತುಪಡಿಸಿ ಬೇರೆ ಯಾವ ಸಚಿವರು ಹಾಗೂ ಶಾಸಕರು ಕೂಡ ಭಾಗಿಯಾಗಿರಲಿಲ್ಲ. ಇದನ್ನೂ ಓದಿ: ಹೆಣ್ಣು ಕುಟುಂಬದ ಕಣ್ಣು, ಸಮಾಜದ ಶಕ್ತಿ: ಡಿಕೆಶಿ
ಅಲ್ಲದೆ ಇಬ್ಬರೂ ಒಟ್ಟಿಗೆ ದೆಹಲಿಗೆ ಬನ್ನಿ ಅಂತ ರಾಹುಲ್ ಗಾಂಧಿ ಅವರು ಕಟ್ಟಾಜ್ಞೆ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ. 29ರಂದು ಬೆಳಗ್ಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆಯಲಾಗಿದೆ ಎಂದು ಖುದ್ದು ಸಿದ್ದರಾಮಯ್ಯನವರೇ ಹೇಳಿದ್ದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.
ಒಟ್ಟಿನಲ್ಲಿ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆ ಕಿತ್ತಾಟಕ್ಕೆ ಇಂದು ಬಹುತೇಕ ತೆರೆ ಬೀಳುವ ಸಾಧ್ಯತೆಯಿದೆ.
