Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!
  • Bangalore
  • Politics
  • State

ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

Praja Vahini December 3, 2025 1 minute read
WhatsApp Image 2025-12-03 at 11.35.35
Spread the love

ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಪಠ್ಯಪುಸ್ತಕಗಳು ನೀಡುವುದರ ಜೊತೆಗೆ ಬಿಸಿಊಟ ಹಾಗೂ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಿ ಕೊಡುತ್ತಿದೆ.

ಹೌದು, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಬಡತನ ರೇಖೆಗಿಂತ ಕೆಳಗಿರುವ ಹಾಗೂ ಬಡತನದ ಕುಟುಂಬದಲ್ಲಿ ಜನಿಸಿರುವ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವುದರಿಂದ ಅವರಿಗೆ ಒಳಿತಾಗಲೆಂದು ರಾಜ್ಯ ಸರ್ಕಾರ ಇದೀಗ ಮತ್ತೊಂದು ಒಳ್ಳೆಯ ಕಾರ್ಯಕ್ಕೆ ಕೈಹಾಕಿದೆ.

ಇನ್ಮುಂದೆ ಪಠ್ಯಪುಸ್ತಕದ ಜೊತೆ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ನೋಟ್ ಬುಕ್ ಗಳನ್ನು ವಿತರಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಈ ಕುರಿತು ಘೋಷಣೆ ಹೊರಡಿಸಿರುವ ಅವರು, ಸರ್ಕಾರಿ ಶಾಲೆಗಳ ಮಕ್ಕಳು ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಪಠ್ಯಪುಸ್ತಕಗಳ ಜೊತೆಗೆ ಉಚಿತ ನೋಟ್ ಬುಕ್‌ಗಳು ಕೂಡಾ ದೊರೆಯಲಿದೆ ಹೇಳಿದ್ದಾರೆ.

ಈಗಾಗಲೇ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಉಚಿತವಾಗಿ ನೀಡುತ್ತಿರುವ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳಿಗೆ ನೋಟ್ಸ್ ಬರೆಯಲು ಅಗತ್ಯವಿರುವ ನೋಟ್ ಬುಕ್ ಕೊರತೆಯನ್ನು ಗಮನದಲ್ಲಿಟ್ಟುಕೊಂಡಿದೆ. ತರಗತಿಯಲ್ಲಿ ಬೋಧನೆ, ಹೋಂವರ್ಕ್ ಮತ್ತು ನೋಟ್ಸ್ ಬರೆಯಲು ಅಗತ್ಯವಾಗಿರುವ ಪುಸ್ತಕಗಳಿಲ್ಲದೆ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಡಿ.10 ರಂದು ಅನಧೀಕೃತ ವಸತಿ, ಕೊಚೀಂಗ್ ಬಂದ್‌ಗೆ ಆಗ್ರಹಿಸಿ ಪ್ರತಿಭಟನೆ

ಇದನ್ನು ಪರಿಹರಿಸಲು ಸರ್ಕಾರ 6 ವಿಷಯಗಳಿಗೆ 6 ಉಚಿತ ನೋಟ್ ಬುಕ್‌ಗಳು ನೀಡುವ ಯೋಜನೆಯನ್ನು ಜಾರಿಗೆ ತರುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ ಸೌಲಭ್ಯ ದೊರೆಯಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಡಿ.10 ರಂದು ಅನಧೀಕೃತ ವಸತಿ, ಕೊಚೀಂಗ್ ಬಂದ್‌ಗೆ ಆಗ್ರಹಿಸಿ ಪ್ರತಿಭಟನೆ
Next: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ, ವಿವಿಧ ಕಾರ್ಯಕ್ರಮಗಳಿಗೆ ಚಾಲನೆ

Views:

50

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.