ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಬುಧವಾರ ಡಿಸೆಂಬರ್ 03) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು, ಇಂದು ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ.
ಬಳಿಕ 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ನಡೆಯಲಿರುವ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆನಂತರ ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ ಹಾಗೂ ಯತಿಪೂಜೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 12:30ಕ್ಕೆ ಪೇಸ್, ಜ್ಞಾನನಗರ, ಕೊಣಾಜೆ ವತಿಯಿಂದ ಆಯೋಜಿಸಿರುವ ಪೇಸ್ ಮತ್ತು ಎ.ಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಫೋರ್ಟ್ಸ್ ಅರೆನಾ ಇದರ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವಾ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!
ಈ ಸಂರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್, ಜಿ.ಪರಮೇಶ್ವರ್, ಸತೀಶ ಜಾರಕಿಹೊಳಿ, ಜಮೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ನಾಸೀರ್ ಅಹಮ್ಮದ್ ಉಪಸ್ಥಿತರಿದ್ದರು.
