ಶಹಾಪುರ: SC-ST ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳು ಬೆಡ್, ಬಾತ್‌ರೂಮ್, ಮೂಲಭೂತ ಸೌಕರ್ಯವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಚರಿತ ಕೊಂಕಲ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಬಸವೇಶ್ವರ ವೃತ್ತದಲ್ಲಿ ಅಂಬೇಡ್ಕರ್ ವಸತಿ ನಿಲಯದಲ್ಲಿ ಮಕ್ಕಳ ಅನುಭವಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಅಹೋ ರಾತ್ರಿ ಧರಣಿ ನಡೆಸುತ್ತಿದ್ದು, ದಲಿತ ವಿದ್ಯಾರ್ಥಿಗಳು ಓದೋ ಹಾಸ್ಟೆಲ್‌ನ ಸ್ಥಿತಿ ದೇವರಿಗೇ ಪ್ರೀತಿ ಎನ್ನುವಂತಾಗಿದೆ. ಅನ್ನದ ಬದಲು ಹೂಳುಗಳನ್ನು ಸೇವಿಸುತ್ತಿರುವ ಮಕ್ಕಳ ಸ್ಥಿತಿ ಯಾರಿಗೂ ಬರಬಾರದು.
ಗ್ರಾಮೀಣ ಭಾಗದ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿರುವ ಈ ವಸತಿ ನಿಲಯದಲ್ಲಿದ್ದು, ಮೂಲ ಸೌಲಭ್ಯಗಳ ಕೊರೆತೆ ಇದೆ. ಹಲವು ಬಾರಿ ವಿದ್ಯಾರ್ಥಿಗಳು ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ರಮಕ್ಕೆ ಮುಂದಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಾರೆ. ಅಧಿಕಾರಿಗಳ ಬೇಜವಾಬ್ದಾರಿ ಯಿಂದ ಮಕ್ಕಳಿಗೆ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಅಹೋರಾತ್ರಿ ಧರಣಿ ನಡೆಯುತ್ತಿದ್ದರು ಯಾವೊಬ್ಬ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಇದು ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಆರೋಪಿಸಿದರು..
ಪೊಲೀಸರು ಸಹ ದಬ್ಬಾಳಿಕೆ ಮಾಡುತ್ತಿದ್ದು ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳು, ತಸಿಲ್ದಾರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಅಲ್ಲಿಯ ವರೆಗೂ ಧರಣಿ ಮುಂದುವರಿಸುತ್ತೇವೆ ಎಂದು ಎಚ್ಚರಿಸಿದರು.
ಈ ವೇಳೆ ವಸತಿ ನಿಲಯ ವಿದ್ಯಾರ್ಥಿಗಳು ಇದ್ದರು.
