Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಖಾದಿಯು ಕೇವಲ ವಸ್ತ್ರವಲ್ಲ; ದೇಶದ ಹೆಮ್ಮಯ ಸಂಕೇತ: ಸಿಎಂ ಬಣ್ಣನೆ
  • Front news
  • Politics
  • State
  • ಬೆಳಗಾವಿ

ಖಾದಿಯು ಕೇವಲ ವಸ್ತ್ರವಲ್ಲ; ದೇಶದ ಹೆಮ್ಮಯ ಸಂಕೇತ: ಸಿಎಂ ಬಣ್ಣನೆ

Praja Vahini December 9, 2025
32e833c8-cb81-42e6-aa38-f07a837cacab
Spread the love

ಬೆಳಗಾವಿ: ಸುವರ್ಣಸೌಧದ ಪಶ್ವಿಮ ದ್ವಾರದಲ್ಲಿ ರಾಷ್ಡ್ರದ ಎರಡನೇ ಅತಿ ದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಡಿ.9ರಂದು ಚರಕ ತಿರುಗಿಸುವ ಮೂಲಕ ಅನಾವರಣಗೊಳಿಸಿದರು.

75 ಅಡಿ ಉದ್ದ ಹಾಗೂ 55 ಅಡಿ ಅಗಲದ ವಿಶಾಲ ದ್ವಜವು ದೇಶಪ್ರೇಮದ ಸಂಕೇತವಾಗಿದ್ದು, ನೋಡುಗರಲ್ಲಿ ದೇಶಭಕ್ತಿಯ ಸುಂದರ ಭಾವನೆಗಳನ್ನು ಬಿತ್ತಲಿದೆ. ಇಂತಹ ಮಹತ್ವದ ಧ್ವಜದ ನಿರ್ಮಾಣಕ್ಕೆ ಶ್ರಮಿಸಿದ ವಿನೋದಕುಮಾರ ರೇವಪ್ಪ ಬಮ್ಮಣ್ಣವರ ಅವರಿಗೆ ಮುಖ್ಯಮಂತ್ರಿಗಳು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಮುಖ್ಯಮಂತ್ರಿಗಳುಮಾತನಾಡಿ,ವಿಧಾನಸಭೆಯ ಭವ್ಯ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೆ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣಕ್ಕೆ ಶ್ರಮಿಸಿ ಉತ್ತಮ ಕಾರ್ಯ ಮಾಡಿದ ಸಭಾಧ್ಯಕ್ಷರಾದ ಯು.ಟಿ.ಖಾದರ್ ಮತ್ತು ಅವರ ತಂಡದವರಿಗೆ ಮತ್ತು ಈ ಧ್ವಜ ನೇಯ್ಗೆಗೆ ಶ್ರಮಿಸಿದ ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದಕುಮಾರ ರೇವಪ್ಪ ಬೊಮ್ಮಣ್ಣವರ ಅವರಿಗೆ ಸರ್ಕಾರದಿಂದ ಅಭಿನಂದನೆ ತಿಳಿಸುವೆ ಎಂದರು. ಖಾದಿಯು ಕೇವಲ ವಸ್ತ್ರ ಅಲ್ಲ; ಅದು ದೇಶದ ಹೆಮ್ಮಯ ಸಂಕೇತ ಎಂದರು.

ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಅವರು ಮಾತನಾಡಿ, ಈ ತ್ರಿವರ್ಣ ಧ್ವಜದಿಂದಾಗಿ ಜನತೆಗೆ ರಾಷ್ಟ್ರ ಭಕ್ತಿ ಮೂಡಲಿದೆ. ಇದರಿಂದ ಮುಂದಿನ ಪೀಳಿಗೆಗೆ ಉತ್ತಮ ಸಂದೇಶ ರವಾನೆಯಾಗಲಿದೆ. ಇದಕ್ಕೆ ಶ್ರಮಿಸಿದ ಸಭಾಧ್ಯಕ್ಷರಾದ ಯು ಟಿ ಖಾದರ್, ಉಪಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಹಾಗೂ ಅವರ ತಂಡದವರಿಗೆ ಅಭಿನಂದನೆಗಳನ್ನು ತಿಳಿಸುವೆ ಎಂದರು.

ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಮಾತನಾಡಿ, ಗಾಂಧೀ ಭೇಟಿ ನೀಡಿದ ನೆಲವಾದ ಬೆಳಗಾವಿಯಲ್ಲಿ ಎರಡನೇ ಅತಿ ದೊಡ್ಡ ರಾಷ್ಟ್ರಧ್ವಜದ ಅನಾವರಣ ನಡೆದಿದ್ದು ಸಂತಸ ತಂದಿದೆ. ಇದರ ಹಿಂದಿನ ಶ್ರಮ, ಬದ್ಧತೆ ಹಾಗೂ ಧ್ವಜದ ಮೇಲಿನ ಪ್ರೇಮ ಶ್ಲಾಘನೀಯವಾದುದು ಎಂದರು.

ಈ ಸಂದರ್ಭದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ,ಲಕ್ಷ್ಮಿ ಹೆಬ್ಬಾಳಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಶಾಸಕರಾದ ಅಶೋಕ ಪಟ್ಟಣ,ತಮ್ಮಯ್ಯ, ಸಲೀಂ ಅಹ್ಮದ್, ನಸೀರ್ ಅಹ್ಮದ್ ಸೇರಿದಂತೆ ಇತರರು ಇದ್ದರು.

About the Author

Praja Vahini

Editor

View All Posts

Spread the love

Post navigation

Previous: ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದ: ಸಿಎಂ
Next: ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.