Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಘಟಪ್ರಭಾ ಹಾಗೂ ಚಿಕ್ಕೋಡಿ ಶಾಖಾ ಕಾಲುವೆ ಆಧುನೀಕರಣಕ್ಕೆ 1722 ಕೋಟಿ ಯೋಜನೆ
  • Bangalore
  • Front news
  • Politics
  • Uncategorized

ಘಟಪ್ರಭಾ ಹಾಗೂ ಚಿಕ್ಕೋಡಿ ಶಾಖಾ ಕಾಲುವೆ ಆಧುನೀಕರಣಕ್ಕೆ 1722 ಕೋಟಿ ಯೋಜನೆ

Praja Vahini December 9, 2025
WhatsApp Image 2025-11-18 at 18.14.46
Spread the love

ಬೆಳಗಾವಿ:  ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಯಿಂದ ಒಟ್ಟಾರೆ 1,35,381 ಹೆಕ್ಟೇರ್ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಬಲದಂಡೆ ಕಾಲುವೆ ದುರಸ್ತಿ ಹಾಗೂ ಚಿಕ್ಕೋಡಿ ಶಾಖಾ ಕಾಲುವೆ ಆಧುನೀಕರಣ ಕಾಮಗಾರಿಗೆ ರೂ.1,722 ಕೋಟಿ ವೆಚ್ಚದಲ್ಲಿ ವಿಸ್ತೃತ ಯೋಜನಾ ವರದಿಯನ್ನು ರೂಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಬೀಳಿಗಿ ಶಾಸಕ ಜಿ.ಟಿ.ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು.

ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ಕೇಂದ್ರ ಜಲ ಆಯೋಗದ ಆಡಳಿತಾತ್ಮಕ ಅನುಮೋದನೆ ಕೋರಿ ಸಲ್ಲಿಸಲಾಗಿದ್ದು, ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಅನುಮೋದನೆ ದೊರೆತರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲಿದೆ.

ಅನುಮೋದನೆ ವಿಷಯವಾಗಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ. ಸ್ಥಳೀಯ ಶಾಸಕರು ಹಾಗೂ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕಾಮಾಗಾರಿ ಅನುಮೋದನೆ ತರಲು ಪ್ರಯತ್ನಿಸಬೇಕು. ಇದರಿಂದ ಕಾಲುವೆ ಕೊನೆಯ ಭಾಗದವರೆಗೆ ನೀರು ಹರಿಸಲು ಸಾಧ್ಯವಾಗಲಿದೆ. ಈಗಾಗಲೇ ಘಟಪ್ರಭಾ ಎಡದಂಡೆ ಮುಖ್ಯ ಕಾಲುವೆ ದುರಸ್ಥಿ ಕಾರ್ಯ ಪೂರ್ಣಗೊಂಡಿದೆ. ಕಾಲುವೆಯಿಂದ ಒಟ್ಟಾರೆ 1,61,258 ಹೆಕ್ಟೇರ್ ಜಮೀನಿಗೆ ನೀರಾವರೆ ಸೌಲಭ್ಯ ಕಲ್ಪಿಸಲಾಗಿದೆ. ಕಾಲುವೆ ಕೊನೆಯ ಭಾಗದವರೆಗೂ ನೀರು ಹರಿಸಲು ಯಾವುದೇ ತೊಂದರೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕಾಲುವೆಯಿಂದ ರೈತರು ಪಂಪ್‌ಸೆಟ್‌ಗಳ ಮೂಲಕ ಜಮೀನುಗಳಿಗೆ ನೀರು ಹರಿಸಲು ಅವಕಾಶವಿಲ್ಲ. ಸರ್ಕಾರ ಕರ್ನಾಟಕ ನೀರಾವರಿ ಅಧಿನಿಯಮ 2024 ಜಾರಿಗೆ ತಂದಿದ್ದು, ಸ್ಥಳೀಯ ಪೋಲಿಸರ ಮೂಲಕ ಅನಧಿಕೃತ ಪಂಪಸೆಟ್ ತೆರವಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟ ಪಡಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್
Next: ಯುಕೆಪಿ ಯೋಜನೆಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು: ಡಿಸಿಎಂ

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.