Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನರೇಗಾ ಯೋಜನೆಯಡಿ ತಡೆಗೋಡೆ ನಿರ್ಮಾಣಕ್ಕೆ ನಿರ್ಬಂಧವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ
  • Front news
  • Politics
  • State

ನರೇಗಾ ಯೋಜನೆಯಡಿ ತಡೆಗೋಡೆ ನಿರ್ಮಾಣಕ್ಕೆ ನಿರ್ಬಂಧವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Praja Vahini December 10, 2025
63f39ca7-7071-451c-99c0-a104c5d8cd23
Spread the love

ಬೆಳಗಾವಿ: ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗಖಾತ್ರಿ (ನರೇಗಾ) ಯೋಜನೆಯಡಿ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಯಾವುದೇ ನಿಬರ್ಂಧ ಇರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಅವರು ಮಾತನಾಡಿದರು.

ಚಿಕ್ಕಮಗಳೂರು ಶಾಸಕ ಹೆಚ್.ಡಿ. ತಮ್ಮಯ್ಯ ಅವರು, ನರೇಗಾ ಯೋಜನೆಯಡಿ ಕ್ರಿಯಾ ಯೋಜನೆಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಅವಕಾಶವಿಲ್ಲ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಕುರಿತಂತೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕೋರಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರಿಸಿ, ನರೇಗಾ ಯೋಜನೆಯಡಿ ಅನುಮತಿಸಿದ ಕಾಮಗಾರಿಗಳಲ್ಲಿ ಸಮುದಾಯ ಆಧಾರಿತ ಉದ್ದೇಶಕ್ಕಾಗಿ ತಡೆಗೋಡೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ನಿರ್ಬಂಧ ವಿಧಿಸಿಲ್ಲ.

ಈ ರೀತಿಯ ಕಾಮಗಾರಿಗಳನ್ನು ನಿಯಮಾನುಸಾರ ಗ್ರಾಮ ಪಂಚಾಯತಿಯ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಂಡು ಅನುಷ್ಠಾನಗೊಳಿಸಬಹುದಾಗಿದೆ. ಒಂದು ವೇಳೆ ಸ್ಥಳೀಯ ಅಧಿಕಾರಿಗಳು ಆ ರೀತಿ ತಪ್ಪು ಮಾಹಿತಿ ನೀಡಿದ್ದರೆ, ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ನರೇಗಾದಡಿ ಸಾಮಗ್ರಿ ವೆಚ್ಚಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ, ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಸಲ್ಲಿಸಲಾಗಿದೆ.

ಅದೇ ರೀತಿ 15 ನೇ ಹಣಕಾಸು ಆಯೋಗದಲ್ಲಿಯೂ ರಾಜ್ಯಕ್ಕೆ ಸುಮಾರು 2,500 ಕೋಟಿ ರೂ. ಅನುದಾನ ಬರಬೇಕಿದೆ, ಈ ಕುರಿತೂ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು. ಅನುದಾನ ಬಂದ ಬಳಿಕ ಗ್ರಾಮ ಪಂಚಾಯತಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

About the Author

Praja Vahini

Editor

View All Posts

Spread the love

Post navigation

Previous: ಅಲ್ಪಸಂಖ್ಯಾತರ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಟೆಂಡರ್
Next: ಬಾಕಿ ಬೆಳೆವಿಮೆ ಪರಿಹಾರ ವಿತರಣೆಗೆ ಕ್ರಮ: ಸಚಿವ ಚಲುವನಾರಾಯಣ ಸ್ವಾಮಿ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.