Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಂಗಳೂರು ಐಟಿ ಪಾರ್ಕ್ ನಿರ್ಮಾಣಕ್ಕೆ ಟೆಂಡರ್ ಆಹ್ವಾನ: ಸಚಿವ ಪ್ರಿಯಾಂಕ್ ಖರ್ಗೆ
  • Front news
  • Politics
  • State

ಮಂಗಳೂರು ಐಟಿ ಪಾರ್ಕ್ ನಿರ್ಮಾಣಕ್ಕೆ ಟೆಂಡರ್ ಆಹ್ವಾನ: ಸಚಿವ ಪ್ರಿಯಾಂಕ್ ಖರ್ಗೆ

Praja Vahini December 10, 2025
IMG_0268
Spread the love

ಬೆಳಗಾವಿ: ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಮಂಗಳೂರಿನಲ್ಲಿ ಐಟಿ ಪಾರ್ಕ್ ವಾಣಿಜ್ಯ ಕಛೇರಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ. ಡಿ.15 ರಂದು ಟೆಂಡರ್ ಬಿಡ್ ತರೆಯಲಾಗುತ್ತದೆ. ನಂತರ ಅಗತ್ಯಬಿದ್ದರೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಟೆಂಡರ್ ಮಾರ್ಗಸೂಚಿಯಲ್ಲಿ ಬದಲಾವಣೆ ತರಲು ಸರ್ಕಾರ ಸಿದ್ಧವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ಮಂಗಳೂರು, ಉಡುಪಿ ಹಾಗೂ ಮಣಿಪಾಲ್ ನಗರಗಳನ್ನು ಕೇಂದ್ರವಾಗಿಸಿಕೊಂಡು ಸ್ಥಳೀಯವಾಗಿ ಐಟಿ ಹಾಗೂ ಬಿಟಿ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಹೆಚ್ಚಿಸಲು ಸರ್ಕಾರ ಮುಂದಡಿ ಇಟ್ಟಿದೆ. ಈ ಹಿನ್ನಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಐಟಿ ಉದ್ಯಮಿಗಳು, ಶಿಕ್ಷಣ ಕ್ಷೇತ್ರದ ಪ್ರಮುಖರು, ಕ್ರೆಡಾಯ್ (ಕರ್ನಾಟಕ ರಿಯಲ್ ಎಸ್ಟೇಟ್ ಡೆವಲ್‍ಪರ್ಸ್ ಅಸೋಸಿಯೇಷನ್) ಸೇರಿದಂತೆ ಎಲ್ಲಾ ಭಾಗಿದಾರರೊಂದಿಗೆ ಚರ್ಚಿಸಿ ರೂಪುರೇμÉಗಳನ್ನು ಸಿದ್ಧಪಡಿಸಲಾಗಿದೆ. ಇದರ ಅನುಸಾರ ವಾಣಿಜ್ಯ ಕಛೇರಿ ಟೆಕ್‍ಪಾರ್ಕ್ ನಿರ್ಮಿಸುವ ಟೆಂಡರ್‍ದಾರರಿಗೆ ವಿನ್ಯಾಸ ನಿರ್ಮಾಣ, ಹಣಕಾಸು ಕಾರ್ಯಾಚರಣೆ ಮತ್ತು ವರ್ಗಾವಣೆಗೆ 30 ವರ್ಷಗಳ ಅವಧಿಗೆ ಸರ್ಕಾರ ಭೂಮಿಯನ್ನು ಗುತ್ತಿಗೆ ನೀಡಲಾಗುತ್ತದೆ. ಈ ಗುತ್ತಿಗೆ ಅವಧಿಯ ನಂತರ ಮುಂದಿನ 30 ವರ್ಷಗಳಿಗೆ ವಿಸ್ತರಿಸಲು ಅವಕಾಶವಿದೆ. ಮಂಗಳೂರಿನ ಇತರೆ ಖಾಸಗಿ ಟೆಕ್ ಕಂಪನಿಗಳು ಸಹ ಕಚೇರಿಗಳನ್ನು ನಿರ್ಮಾಣ ಮಾಡುತ್ತಿವೆ. ಇಲ್ಲಿ ಟೆಕ್ ಕಂಪನಿಗಳಿಗೆ ಸರ್ಕಾರಿ ದರಕ್ಕಿಂತಲೂ ಕಡಿಮೆ ಮೊತ್ತದಲ್ಲಿ ಬಾಡಿಗೆ ವಿಧಿಸುತ್ತಿವೆ ಎನ್ನುವ ಮಾಹಿತಿಯಿದೆ.

ಆದರೆ ಸರ್ಕಾರದ ವಾಣಿಜ್ಯ ಕಚೇರಿ ಟೆಕ್ ಪಾರ್ಕ್‍ನಲ್ಲಿ ಜಾಗ ಪಡೆಯುವ ಕಂಪನಿಗಳಿಗೆ ಕೌಶಲ್ಯ ತರಬೇತಿ, ನೋಂದಣಿ ಹಾಗೂ ಟೆಕ್ ಸಮಾವೇಶಗಳಲ್ಲಿ ವೇದಿಕೆ ಕಲ್ಪಿಸುವ ಮೂಲಕ ಜಾಗತಿಕ ಮನ್ನಣೆ ದೊರಕಿಸಲು ಸರ್ಕಾರ ಸಹಾಯ ಮಾಡಲಿದೆ. ಆದ್ದರಿಂದ ಖಾಸಗಿ ಕಂಪನಿಗಳು ಸರ್ಕಾರದ ವಾಣಿಜ್ಯ ಕಚೇರಿ ಟೆಕ್ ಪಾರ್ಕ್‍ನಲ್ಲಿ ಕಾರ್ಯಾರಂಭ ಮಾಡುವ ವಿಶ್ವಾಸವಿದೆ. ಹಸಿರು ಇಂಧನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಡೆನ್ಮಾರ್ಕ್ ದೇಶದ ಗಲ್ಫ್ ರಿಸರ್ಚ್ ಕಂಪನಿ ಮಂಗಳೂರಿನಿಂದಲೇ ಕಾರ್ಯನಿರ್ವಹಿಸುತ್ತಿದೆ. ಮುಂಬರುವ ದಿನಗಳಲ್ಲಿ ಮಂಗಳೂರು ಸಹ ಐಟಿ ಬಿಟಿ ಕ್ಷೇತ್ರದಲ್ಲಿ ಪ್ರಮುಖ ನಗರವಾಗಿ ಬೆಳೆಯಲಿದೆÉ. ಇದೇ ಮಾದರಿಯಲ್ಲಿ ರಾಜ್ಯದ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಳ್ಳಾರಿ, ಕಲಬುರಗಿ ನಗರಗಳಲ್ಲಿಯೂ ಖಾಸಗಿ ಸಹಭಾಗಿತ್ವದಲ್ಲಿ ಐಟಿ ಬಿಟಿ ಟೆಕ್ ಪಾರ್ಕ್‍ಗಳ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕಲ್ಯಾಣ ಚತುಷ್ಪಥ ರಸ್ತೆ ನಿರ್ಮಾಣ: ಸಚಿವ ಸತೀಶ ಜಾರಕಿಹೊಳಿ
Next: ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ    

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.